ಕಂಠೀರವ ಕ್ರೀಡಾಂಗಣದಲ್ಲಿ ಸಿಎಂ ಪದಗ್ರಹಣ ಕಾರ್ಯಕ್ರಮ – ಯಾವ್ಯಾವ ರಸ್ತೆಗಳಲ್ಲಿ ಸಂಚಾರ ಬಂದ್?
ವಿಧಾನಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ರಚನೆಗೆ ಕೌಂಟ್ ಡೌನ್ ಶುರುವಾಗಿದೆ. ಮೇ 20ರಂದು ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಇದನ್ನೂ ಓದಿ : ಲೋಕಸಭಾ ಚುನಾವಣೆಯಲ್ಲಿ ಜೋಶಿಗೆ ಶೆಟ್ಟರ್ ಸವಾಲ್..? – ಏನಿದು ಕಾಂಗ್ರೆಸ್ ಮಾಸ್ಟರ್ ಪ್ಲ್ಯಾನ್?
ಸಿದ್ದರಾಮಯ್ಯ ಸರ್ಕಾರದ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆಯಲ್ಲಿ ಸುಗಮ ಸಂಚಾರ ನಿಟ್ಟಿನಲ್ಲಿ ಹಲವು ರಸ್ತೆಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಜತೆಗೆ ಹಲವು ರಸ್ತೆಗಲ್ಲಿ ನಿರ್ಬಂಧ ಕೂಡಾ ಹೇರಲಾಗಿದೆ.ಶನಿವಾರ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 2.30 ಗಂಟೆಯವರೆಗೆ ಈ ನಿರ್ಬಂಧ ಜಾರಿಯಲ್ಲಿದ್ದು, ವಾಹನ ಸವಾರರು ಸಹಕರಿಸುವಂತೆ ಬೆಂಗಳೂರು ಪೊಲೀಸ್ ಇಲಾಖೆ ಸೂಚನೆ ನೀಡಿದೆ. ಪ್ರಮಾಣ ವಚನ ಕಾರ್ಯಕ್ರಮವು ಮಧ್ಯಾಹ್ನ 12.30 ಕ್ಕೆ ನಡೆಯಲಿದೆ. ರಾಜ್ಯದ ಹಲವೆಡೆಯಿಂದ ಲಕ್ಷಾಂತರ ಮಂದಿ ಆಗಿಸುವ ನಿರೀಕ್ಷೆ ಇದೆ. ಹಾಗೂ ವಿವಿಧ ರಾಜ್ಯಗಳ ಹಾಗೂ ಕೇಂದ್ರ ಮಟ್ಟದ ನಾಯಕರು ಕೂಡ ಭಾಗವಹಿಸಲಿದ್ದಾರೆ.
ಯಾವ್ಯಾವ ರಸ್ತೆ ಬಂದ್..?
- ಕ್ವೀನ್ಸ್ ವೃತ್ತದ ಕಡೆಯಿಂದ ಸಿದ್ದಲಿಂಗಯ್ಯ ವೃತ್ತದ ಕಡೆಗೆ ಬರುವ ರಸ್ತೆಗಳಲ್ಲಿ ಎಲ್ಲಾ ಮಾದರಿಯ ವಾಹನಗಳನ್ನು ನಿರ್ಬಂಧಿಸಲಾಗಿದೆ. ವಾಹನ ಸವಾರರು ಬದಲಿ ಮಾರ್ಗದಲ್ಲಿ ಸಂಚರಿಸಬಹುದು ಎಂದು ಪೊಲೀಸ್ ಸೂಚನೆ ನೀಡಿದ್ದಾರೆ.
- ರಸ್ತೆ ಬಳಕೆದಾರರು ಕ್ವೀನ್ಸ್ ವೃತ್ತದಲ್ಲಿ ಎಡ ಅಥವಾ ಬಲ ತಿರುವು ಪಡೆದು ಲ್ಯಾವಲ್ಲೆ ರಸ್ತೆ ಅಥವಾ ಕ್ವೀನ್ಸ್ ರಸ್ತೆಯಲ್ಲಿ ಸಂಚರಿಸಬೇಕು.
- ಬಾಳೇಕುಂದ್ರಿ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ತೆರಳುವ ವಾಹನಗಳನ್ನು ಪಟ್ಟಾ ಜಂಕ್ಷನ್‌ನಲ್ಲಿ ಪೊಲೀಸ್ ತಿಮ್ಮಯ್ಯ ವೃತ್ತದ ಕಡೆಗೆ ಡೈವರ್ಷನ್ ಮಾಡುವುದರಿಂದ ಬಿಎಂಟಿಸಿ ಹಾಗೂ ಇತರೆ ವಾಹನಗಳು ಪೊಲೀಸ್ ತಿಮ್ಮಯ್ಯ ವೃತ್ತದಲ್ಲಿ ಎಡ ತಿರುವು ಪಡೆದು ಕೆ.ಆರ್.ಸರ್ಕಲ್ ಮೂಲಕ ಸಂಚರಿಸಬೇಕು.
- ಸಿಟಿಓ ವೃತ್ತದಿಂದ ಕ್ವೀನ್ಸ್ ವೃತ್ತದ ಕಡೆಗೆ ವಾಹನಗಳ ಸಂಚಾರವನ್ನು ನಿರ್ಬಂಧಿಸಿದ್ದು, ರಸ್ತೆ ಬಳಕೆದಾರರು ಕಬ್ಬನ್ ರಸ್ತೆಯ ಮೂಲಕ ಅನಿಲ್ ಕುಂಬ್ಳೆ ವೃತ್ತದ ಕಡೆಗೆ ಅಥವಾ ಮಣಿಪಾಲ್ ಸೆಂಟರ್ ಕಡೆಗೆ ಸಂಚರಿಸಬೇಕು.
- ಹಲಸೂರು ಗೇಟ್ ಕಡೆಯಿಂದ ಸಿದ್ದಲಿಂಗಯ್ಯ ಸರ್ಕಲ್ ಕಡೆಗೆ ಹೋಗುವ ವಾಹನಗಳನ್ನು ದೇವಾಂಗ ಜಂಕ್ಷನ್ ಹಾಗೂ ಮಿಷನ್ ರಸ್ತೆ ಕಡೆಗೆ ಮಾರ್ಗ ಬದಲಾವಣೆ ಮಾಡಲಾಗಿದೆ.