ಬಂಡೆ ಸಂಪುಟದಲ್ಲಿ ಯಾರೆಲ್ಲಾ ಸಚಿವರು? – ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ..!

ಬಂಡೆ ಸಂಪುಟದಲ್ಲಿ ಯಾರೆಲ್ಲಾ ಸಚಿವರು? – ಸ್ಪೀಕರ್ ಸ್ಥಾನಕ್ಕೆ ಅಚ್ಚರಿಯ ಆಯ್ಕೆ..!

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆಗಳು ನಡೆಯುತ್ತಿವೆ. ಇದರ ಜೊತೆಗೆ ಬಂಡೆ ಸಂಪುಟಕ್ಕೆ ಸೇರುವ ಸಚಿವರು ಯಾರೆಲ್ಲಾ ಎಂಬ ಲಿಸ್ಟ್ ಇಲ್ಲಿದೆ.

ಇದನ್ನೂ ಓದಿ:ಮುಖ್ಯಮಂತ್ರಿ ಪಟ್ಟ ತೊರೆದ ಸಿದ್ದರಾಮಯ್ಯ – ಅಹಿಂದ ನಾಯಕ ನಡೆದು ಬಂದ ಹಾದಿ ಹೇಗಿತ್ತು?

ಡಿಕೆ ಶಿವಕುಮಾರ್ ಅವರ ಪಟ್ಟಾಭಿಷೇಕಕ್ಕೆ ಸಕಲ ತಯಾರಿ ನಡೆಯುತ್ತಿದೆ. ಇದ ಜೊತೆಗೆ 12ರಿಂದ 13 ಮಂದಿ ಹಿರಿಯ ಮತ್ತು ಅನುಭವಿ ಶಾಸಕರು ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸೋಮವಾರ (ಜೂನ್ 1)  ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅದಕ್ಕೂ ಮೊದಲು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶಾಸಕಾಂಗ ಸಭೆಯನ್ನು ನಿಗದಿಪಡಿಸಿಕೊಳ್ಳಲಾಗಿದೆ. ಆ ನಂತರ ಸೋಮವಾರ ಸಂಜೆ ಡಿಕೆ ಶಿವಕುಮಾರ್ ಅವರು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದು ಬಂದಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಅವರ ಜೊತೆಗೆ ಸಂಪುಟ ಸಚಿವರಾಗಿಯೂ ಕೆಲ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಿದ್ದು ಸಂಪುಟದಲ್ಲಿದ್ದ ಕೆಲ ಸಚಿವರು ಕೂಡಾ ಡಿಕೆ ಸಂಪುಟದಲ್ಲಿಯೂ ಸಚಿವರಾಗಿ ಮುಂದುವರೆಯುವ ಸಾಧ್ಯತೆಯಿದೆ. ಕೃಷ್ಣ ಭೈರೇಗೌಡ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಕೆಜೆ ಜಾರ್ಜ್, ಈಶ್ವರ್ ಖಂಡ್ರೆ, ಎಂಬಿ ಪಾಟೀಲ್, ಡಾ.ಜಿ ಪರಮೇಶ್ವರ್, ಎಚ್ ಕೆ ಪಾಟೀಲ್, ಶಿವರಾಜ ತಂಗಡಗಿ, ಕೆ ಎಚ್ ಮುನಿಯಪ್ಪ, ಮಂಕಾಳ್ ವೈದ್ಯ, ಸಂತೋಷ್ ಲಾಡ್ ಮತ್ತು ರಾಮಲಿಂಗಾ ರೆಡ್ಡಿ ಮೊದಲ ಹಂತದಲ್ಲಿ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಹೈಕಮಾಂಡ್ ಒಪ್ಪಿದರೆ 13 ಮಂದಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಹಾಲಿ ಸ್ಪೀಕರ್ ಯುಟಿ ಖಾದರ್ ಅವರು ಸಚಿವರಾಗುವ ಸಾಧ್ಯತೆ ನಿಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು ಸ್ಪೀಕರ್ ಹುದ್ದೆಯಿಂದ ಕೆಳಗಳಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಯುಟಿ ಖಾದರ್ ಅವರಿಂದ ತೆರವಾಗುವ ಸ್ಪೀಕರ್ ಸ್ಥಾನಕ್ಕೆ ಈಗಾಗಲೇ ಸಚಿವರಾಗಿದ್ದ ದಿನೇಶ್ ಗುಂಡೂರಾವ್, ಹೆಚ್ ಕೆ ಪಾಟೀಲ್ ಅಥವಾ ಡಾ ಜಿ ಪರಮೇಶ್ವರ್ ಅವರನ್ನು ಸ್ಪೀಕರ್ ಮಾಡುವ ಬಗ್ಗೆಯೂ ಕಾಂಗ್ರೆಸ್‌ನಲ್ಲಿ ಚರ್ಚೆ ನಡೆದಿದೆ. ಮತ್ತೊಂದೆಡೆ ಹ್ಯಾರಿಸ್, ಪ್ರಿಯಾಕೃಷ್ಣಕೂಡಾ ಸಚಿವರಾಗುವ ಆಕಾಂಕ್ಷಿಗಳಾಗಿದ್ದಾರೆ.

Sulekha

Leave a Reply

Your email address will not be published. Required fields are marked *