ನನಗೂ ಸಿಎಂ ಆಗುವ ಬಯಕೆಯಿದೆ! – ಗೃಹ ಸಚಿವ ಜಿ ಪರಮೇಶ್ವರ್ ಶಾಕಿಂಗ್ ಹೇಳಿಕೆ!

ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಸಿಎಂ ಸ್ಥಾನದ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಡುತ್ತಿದೆ. ಒಂದು ವೇಳೆ ಸಿಎಂ ಸ್ಥಾನವನ್ನು ಮುಂದುವರಿಸಲು ಹೈಕಮಾಂಡ್ ನಿರ್ಧಾರ ಮಾಡಿದರೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಏನು ಮಾಡುತ್ತಾರೆ ಎಂಬುವುದು ಪ್ರಶ್ನೆಯಾಗಿದೆ. ಇದ್ರ ನಡುವೆ ಗೃಹ ಸಚಿವ ಡಾ. ಜಿ ಪರಮೇಶ್ವರ್, ನಾನು ಕೂಡ ಮುಖ್ಯಮಂತ್ರಿ ಆಗುವ ಬಯಕೆ ಹೊಂದಿದ್ದೇನೆ ಎಂದು ಹೇಳಿ ಅಚ್ಚರಿ ಮೂಡಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ನಮ್ಮ ಮೆಟ್ರೋ ಕೆಂಪು ಮಾರ್ಗ ಕಾಮಗಾರಿ ಶೀಘ್ರದಲ್ಲೇ ಆರಂಭ! – ಎಲ್ಲೆಲ್ಲಿ ಹಾದುಹೋಗಲಿದೆ ರೆಡ್ ಲೈನ್?
ರಾಜ್ಯದಲ್ಲಿ ಸಿಎಂ ಬದಲಾವಣೆಯಾಗುವುದು ಫಿಕ್ಸ್ ಎಂದು ಒಂದು ಬಣ ಹೇಳ್ತಿದ್ರೆ, ಸಿಎಂ ಸಿದ್ದರಾಮಯ್ಯ ನಾನೇ 5ವರ್ಷ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸಚಿವರ ಜೊತೆ ಇಂದು ಡಿನ್ನರ್ ಮೀಟಿಂಗ್ ನಡೆಸಲಿದ್ದಾರೆ. ಇದ್ರ ಬೆನ್ನಲ್ಲೇ ಡಾ. ಜಿ ಪರಮೇಶ್ವರ್, ನಾನು ಕೂಡ ಮುಖ್ಯಮಂತ್ರಿ ಆಗುವ ಬಯಕೆ ಹೊಂದಿದ್ದೇನೆ. ಯಾಕೆ ಆಗಬಾರದು ಎಂದು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಪರಮೇಶ್ವರ್, ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರವಾಗಿ ಪ್ರತಿಕ್ರಿಯಿಸಿದರು. ಅದು ಮುಖ್ಯಮಂತ್ರಿಗಳು ಮತ್ತು ಹೈಕಮಾಂಡ್ಗೆ ಬಿಟ್ಟ ವಿಚಾರ ಅವರು ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳುತ್ತಾರೆ. ಸಚಿವರಾಗುವ ಬಯಕೆ ಎಲ್ಲ ಶಾಸಕರಿಗೂ ಇರುತ್ತದೆ. ಮುಖ್ಯಮಂತ್ರಿ ಮತ್ತು ಸಚಿವರು ಭೋಜನ ಕೂಟಗಳಿಗೆ ಕರೆ ನೀಡುವುದು ಸಾಮಾನ್ಯ. ಬಿಜೆಪಿ ಈ ವಿಚಾರದಲ್ಲಿ ತಲೆಹಾಕಬೇಕಾದ ಅಗತ್ಯವಿಲ್ಲ. ಸಿಎಂ ನಮ್ಮನ್ನು ಊಟ ಅಥವಾ ಭೋಜನಕ್ಕೆ ಆಹ್ವಾನಿಸಿದ್ದು ಇದೇ ಮೊದಲಲ್ಲ. ಪ್ರತಿ ಅಧಿವೇಶನದಲ್ಲೂ ಇದನ್ನು ಮಾಡಲಾಗುತ್ತದೆ ಎಂದು. ಅವರು ಹೇಳಿದ್ದಾರೆ.

ನೋಡಿರಿ

