ಟೀಮ್ ಇಂಡಿಯಾ ತಂಡವನ್ನು ತೊರೆದು ಮುಂಬೈಗೆ ಬಂದಿದ್ದೇಕೆ ವಿರಾಟ್ ಕೊಹ್ಲಿ?

ಟೀಮ್ ಇಂಡಿಯಾ ತಂಡವನ್ನು ತೊರೆದು ಮುಂಬೈಗೆ ಬಂದಿದ್ದೇಕೆ ವಿರಾಟ್ ಕೊಹ್ಲಿ?

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯನ್ನು ಟೀಮ್ ಇಂಡಿಯಾ ಆಟಗಾರರು ಉತ್ಸಾಹದಿಂದ ಎದುರು ನೋಡುತ್ತಿದ್ದಾರೆ. ಐಸಿಸಿ ವಿಶ್ವಕಪ್‌ನಲ್ಲಿ ನೆದರ್ಲೆಂಡ್ಸ್ ವಿರುದ್ಧದ ಅಭ್ಯಾಸ ಪಂದ್ಯಕ್ಕಾಗಿ ಈಗಾಗಲೇ ಟೀಮ್ ಇಂಡಿಯಾ ತಿರುವನಂತಪುರಂ ತಲುಪಿದೆ. ಆದರೆ, ವಿರಾಟ್ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ. ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಕೊಹ್ಲಿ ಮುಂಬೈಗೆ ತೆರಳಿದ್ದಾರೆ ಎನ್ನಲಾಗ್ತಿದೆ.

ಇದನ್ನೂ ಓದಿ: ವಿಶ್ವಕಪ್ ಗೆದ್ದರೆ ಕೊಹ್ಲಿ ನಿವೃತ್ತಿ ? – ವಿರಾಟ್ ಬಗ್ಗೆ ಆಪ್ತ ಮಾಜಿ ಕ್ರಿಕೆಟರ್ ಎಬಿಡಿ ವಿಲಿಯರ್ಸ್ ಹೀಗೆ ಹೇಳಿದ್ಯಾಕೆ?

ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಅಕ್ಟೋಬರ್ 5 ರಂದು ಚಾಲನೆ ಸಿಗಲಿದೆ. ಇದಕ್ಕೂ ಮುನ್ನ ಎಲ್ಲ ತಂಡಗಳು ಅಭ್ಯಾಸ ಪಂದ್ಯ ಆಡುತ್ತಿದೆ. ಭಾರತ ತನ್ನ ಎರಡನೇ ವಾರ್ಮ್-ಅಪ್ ಮ್ಯಾಚ್ ಅ. 3 ರಂದು ನೆದರ್ಲೆಂಡ್ಸ್ ವಿರುದ್ಧ ತಿರುವನಂತಪುರಂನಲ್ಲಿ ಆಡಲಿದೆ. ಈಗಾಗಲೇ ಟೀಮ್ ಇಂಡಿಯಾ ತಿರುವನಂತಪುರಂ ತಲುಪಿದೆ. ಆದರೆ, ವಿರಾಟ್ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ. ರೋಹಿತ್ ಶರ್ಮಾ, ಕೋಚ್ ದ್ರಾವಿಡ್, ಹಾರ್ದಿಕ್ ಪಾಂಡ್ಯ ಸೇರಿದಂತೆ ವಿಶ್ವಕಪ್ ತಂಡದಲ್ಲಿರುವ ಎಲ್ಲ ಆಟಗಾರರು ಭಾನುವಾರ (ಅಕ್ಟೋಬರ್ 1) ತಿರುವನಂತಪುರಕ್ಕೆ ಪ್ರಯಾಣ ಬೆಳೆಸಿದರು. ಆದರೆ, ವಿರಾಟ್ ಕೊಹ್ಲಿ ತಂಡದಲ್ಲಿ ಇರಲಿಲ್ಲ. ಕೌಟುಂಬಿಕ ತುರ್ತುಪರಿಸ್ಥಿತಿಯಿಂದಾಗಿ ಕೊಹ್ಲಿ ಮುಂಬೈಗೆ ತೆರಳಲು ತಂಡದ ಮ್ಯಾನೇಜ್ಮೆಂಟ್ಗೆ ಅನುಮತಿ ಕೋರಿದ್ದಾರೆ ಎನ್ನಲಾಗಿದೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಯ ಮೂಲವೊಂದು, ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಖಚಿತಪಡಿಸಿದೆ. ವಿರಾಟ್ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ಹೇಳಿದೆ. ಸೋಮವಾರ ತಿರುವನಂತಪುರದಲ್ಲಿ ಕೊಹ್ಲಿ ತಂಡವನ್ನು ಮತ್ತೆ ಸೇರಿಕೊಳ್ಳುವ ನಿರೀಕ್ಷೆಯಿದೆ. ಭಾರತವು ಮಂಗಳವಾರ ನೆದರ್ಲೆಂಡ್ಸ್ ವಿರುದ್ಧ ಎರಡನೇ ಮತ್ತು ಅಂತಿಮ ಅಭ್ಯಾಸ ಪಂದ್ಯವನ್ನು ಆಡಲಿದೆ.

Sulekha