ಎಸ್‌ಐಟಿಗೆ ಕಗ್ಗಂಟಾದ ಪ್ರಜ್ವಲ್‌ ರೇವಣ್ಣ ಪ್ರಕರಣ – ಭವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡಿ ಎಂದು ಸರ್ಕಾರ ಸೂಚನೆ ಕೊಟ್ಟಿದ್ದೇಕೆ?

ಎಸ್‌ಐಟಿಗೆ ಕಗ್ಗಂಟಾದ ಪ್ರಜ್ವಲ್‌ ರೇವಣ್ಣ ಪ್ರಕರಣ – ಭವಾನಿ ರೇವಣ್ಣ ವಿರುದ್ಧ ಎಚ್ಚರಿಕೆಯ ಹೆಜ್ಜೆ ಇಡಿ ಎಂದು ಸರ್ಕಾರ ಸೂಚನೆ ಕೊಟ್ಟಿದ್ದೇಕೆ?

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಮೇಲೆ ಟ್ವಿಸ್‌ ಸಿಗುತ್ತಿದೆ. ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ. ವಿಡಿಯೋ ಹಂಚಿದ್ದು ಯಾರು ಅಂತಾ ಪತ್ತೆ ಹಚ್ಚುತ್ತಿದ್ದಾರೆ. ಈಗಾಗಲೇ ಈ ಪ್ರಕರಣ ಸಂಬಂಧ ವಕೀಲ ದೇವರಾಜೇಗೌಡ ಸೇರಿದಂತೆ ಕೆಲವರನ್ನು ಅರೆಸ್ಟ್‌ ಮಾಡಲಾಗಿದೆ. ಪ್ರಕರಣದ ಸಂತ್ರಸ್ತೆಯ ಅಪಹರಣ ಆರೋಪದ ಮೇಲೆ ಹೆಚ್‌ಡಿ ರೇವಣ್ಣ ಜೈಲಿಗೆ ಹೋಗಿ ಬಂದಿದ್ದಾರೆ. ಇನ್ನು ಈ ಪ್ರಕರಣದ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೂ ನೋಟಿಸ್‌ ನೀಡಲಾಗಿದೆ. ಇದೀಗ  ಭವಾನಿ ರೇವಣ್ಣ ವಿರುದ್ಧ ಎಸ್‍ಐಟಿ ಎಚ್ಚರಿಕೆಯ ಹೆಜ್ಜೆ ಇಡುವಂತೆ ಸರ್ಕಾರ ಸೂಚಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ರಾಜಸ್ಥಾನ್ ರಾಯಲ್ಸ್​ಗೆ ಸೋಲುಣಿಸಿದ ಪಂಜಾಬ್ ಕಿಂಗ್ಸ್​! – ಆರ್‌ ಆರ್‌ ಪ್ಲೇ ಆಫ್‌ ಕನಸು ಭಗ್ನ?

ಪ್ರಜ್ವಲ್‌ ರೇವಣ್ಣ ಪ್ರಕರಣ ಎಸ್‌ಐಟಿ ಅಧಿಕಾರಿಗಳಿಗೆ ಕಗ್ಗಂಟಾಗಿ ಪರಿಣಮಿಸಿದೆ. ಪ್ರಜ್ವಲ್‌ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇನ್ನು ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ ಸಂಬಂಧ ಎಸ್‍ಐಟಿ ಮೂರು ಬಾರಿ ನೋಟಿಸ್ ನೀಡಿದರೂ ಭವಾನಿ ರೇವಣ್ಣ ಆರೋಗ್ಯದ ನೆಪ ಹೇಳಿ ವಿಚಾರಣೆಗೆ ಹಾಜರಾಗದೇ ಗೈರಾಗಿದ್ದಾರೆ. ರೇವಣ್ಣ ಬಂಧನ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆ ಈ ವಿಚಾರದಲ್ಲೂ ಅದೇ ರೀತಿ ನಡೆದರೆ ಸಮಸ್ಯೆ ಎದುರಿಸಬೇಕಾಗುತ್ತದೆ ಎಂಬುದು ಸರ್ಕಾರದ ಲೆಕ್ಕಾಚಾರ. ಇದೇ ಕಾರಣಕ್ಕೆ ಭವಾನಿ ರೇವಣ್ಣ ವಿಚಾರದಲ್ಲಿ ಎಸ್‍ಐಟಿ ಅಧಿಕಾರಿಗಳಿಗೆ ಎಚ್ಚರಿಕೆಯ ಸಂದೇಶ ನೀಡಲಾಗಿದೆ.

ಇನ್ನು ಜೈಲಿನಿಂದ ಹೊರ ಬಂದಿರುವ ಹೆಚ್ ಡಿ ರೇವಣ್ಣ ಟೆಂಪಲ್‌ ರನ್‌ ಶುರುಮಾಡಿದ್ದಾರೆ. ಗುರುವಾರ ಬೆಳಗ್ಗೆ ದೇವಸ್ಥಾನಗಳಿಗೆ ತೆರಳಿ ಪೂಜೆ  ಸಲ್ಲಿಸಿದರು. ಸಂಕಟ, ಆಪತ್ತುಗಳು ಎದುರಾದಾಗ ಜನ ದೇವರ ಮೊರೆಹೋಗಿ, ಅವುಗಳಿಂದ ಪಾರು ಮಾಡು, ಪರಿಸ್ಥಿತಿ ಎದುರಿಸಲು ಧೈರ್ಯ ನೀಡು ಅಂತ ಪ್ರಾರ್ಥಿಸಿಕೊಳ್ಳುತ್ತಾರೆ.

Shwetha M