ಗಣೇಶ ಹಬ್ಬಕ್ಕೆ ಸರ್ಕಾರಿ ಶಾಲೆಯ 19 ಸಾವಿರ ಮಕ್ಕಳಿಗೆ ಬಟ್ಟೆ, ವರಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಸೀರೆ ಕೊಡಿಸುತ್ತೇನೆ – ಪ್ರದೀಪ್‌ ಈಶ್ವರ್‌

ಗಣೇಶ ಹಬ್ಬಕ್ಕೆ ಸರ್ಕಾರಿ ಶಾಲೆಯ 19 ಸಾವಿರ ಮಕ್ಕಳಿಗೆ ಬಟ್ಟೆ, ವರಲಕ್ಷ್ಮೀ ಹಬ್ಬಕ್ಕೆ ಮಹಿಳೆಯರಿಗೆ ಸೀರೆ ಕೊಡಿಸುತ್ತೇನೆ – ಪ್ರದೀಪ್‌ ಈಶ್ವರ್‌

ನಮಸ್ತೆ ಚಿಕ್ಕಬಳ್ಳಾಪುರ ಹೆಸರಲ್ಲಿ ನೂತನ ಶಾಸಕ ಪ್ರದೀಪ್ ಈಶ್ವರ್ ಪ್ರತಿ ದಿನ ಬೆಳಗ್ಗೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರ ಭಾಗವಾಗಿ ಶಾಸಕರು ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ಕೊಡಿಸುವ ಕಾರ್ಯಕ್ರಮವನ್ನು ಮಾಡುತ್ತಿದ್ದಾರೆ. ಅಜ್ಜವಾರ ಗ್ರಾಮಕ್ಕೆ ತೆರಳಿದ್ದ ವೇಳೆ ಪ್ರದೀಪ್‌ ಈಶ್ವರ್‌ ಗಣೇಶನ ಹಬ್ಬಕ್ಕೆ ಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 19 ಸಾವಿರ ಮಕ್ಕಳಿಗೆ ಬಟ್ಟೆ ಕೊಡಿಸುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಮಹಿಳಾ ಉದ್ಯೋಗಿಗಳಿಗೆ 1 ವರ್ಷ ಹೆರಿಗೆ ರಜೆ – ಮಗುವಿನ ತಂದೆಗೂ 1 ತಿಂಗಳು ಲೀವ್‌!

ಈ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರದೀಪ್‌ ಈಶ್ವರ್‌, ಸರಕಾರಿ ಶಾಲೆ ಮಕ್ಕಳಿಗೆ ಯಾವುದೇ ತೊಂದರೆ ಆಗಬಾರದು. ಹೀಗಾಗಿ ಗಣೇಶನ ಹಬ್ಬಕ್ಕೆ ಎಲ್ಲ ಮಕ್ಕಳಿಗೂ ಬಟ್ಟೆಕೊಡಿಸುತ್ತಿದ್ದೇನೆ. ಮಹಿಳೆಯರಿಗೆ ವರಲಕ್ಷ್ಮೀ ಹಬ್ಬಕ್ಕೆ ಸೀರೆ ಕೊಡಿಸುತ್ತಿದ್ದೇನೆ  ಎಂದು ಹೇಳಿದ್ದಾರೆ.

ಇನ್ನು ಕೆಲ ಗ್ರಾಮಗಳಲ್ಲಿ ಸರಿಯಾದ ಸ್ಮಶಾನಕ್ಕೆ ಬೇಕಾದ ಜಾಗವೇ ಇಲ್ಲ. ಹೂತಿರುವ ಶವವನ್ನು ಹೊರಕ್ಕೆ ತೆಗೆದು ಆನಂತರ ಬೇರೊಬ್ಬರ ಶವ ಸಂಸ್ಕಾರ ಮಾಡುವ ಕೆಲಸ ಆಗುತ್ತಿದೆ. ಇದಕ್ಕೆ ಜಿಲ್ಲಾಧಿಕಾರಿಯವರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಪ್ರದೀಪ್‌ ಈಶ್ವರ್‌ ಹೇಳಿದ್ದಾರೆ.

ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮದಡಿ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಜನರ ಸಮಸ್ಯೆಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ. ನಮ್ಮ ವೈಬ್‌ಸೈಟ್‌ಗೆ ಸಾಕಷ್ಟು ಮಂದಿ ಸಮಸ್ಯೆಗಳನ್ನು ಕಳುಹಿಸಿದ್ದಾರೆ. ಅವುಗಳನ್ನು ಬಗೆಹರಿಸುವ ಕೆಲಸ ಮಾಡುತ್ತಿದ್ದೇನೆ. ಅಧಿಕಾರಿಗಳು ಸಹ ಸ್ಪಂದಿಸುತ್ತಿದ್ದಾರೆ. ನಮಸ್ತೆ ಚಿಕ್ಕಬಳ್ಳಾಪುರ ಕಾರ್ಯಕ್ರಮಕ್ಕೆ ಬೆಳಗ್ಗೆಯೇ ಎದ್ದು ನಮ್ಮ ಜೊತೆ ಬರುತ್ತಿದ್ದಾರೆ. ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ  ಎಂದು ಹೇಳಿದ್ದಾರೆ.

suddiyaana