ಬಿಜೆಪಿಯಿಂದ ನಿಲ್ಲದ ಪಕ್ಷಾಂತರ ಪರ್ವ – ಮರಳಿ ‘ಕೈ’ ಹಿಡಿಯುತ್ತಾರಾ ಮಾಲಕರೆಡ್ಡಿ..?

 ಬಿಜೆಪಿಯಿಂದ ನಿಲ್ಲದ ಪಕ್ಷಾಂತರ ಪರ್ವ – ಮರಳಿ ‘ಕೈ’ ಹಿಡಿಯುತ್ತಾರಾ ಮಾಲಕರೆಡ್ಡಿ..?

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಬಿಜೆಪಿಗೆ ಹೊಡೆತದ ಮೇಲೆ ಹೊಡೆತ ಬೀಳುತ್ತಿದೆ. ಅದೂ ಕೂಡ 2019ರ ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಯವರನ್ನ ಸೋಲಿಸಲು ಬಿಜೆಪಿ ಸೇರಿದ್ದವ್ರೆಲ್ಲಾ ಘರ್ ವಾಪ್ಸಿ ಎಂಬಂತೆ ಮರಳಿ ಕಾಂಗ್ರೆಸ್ ಸೇರುತ್ತಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಬಿಗ್ ಶಾಕ್.. ಕಾಂಗ್ರೆಸ್ ಗೆ ಚಿಂಚನಸೂರ್ – ಚುನಾವಣಾ ಲೆಕ್ಕಾಚಾರ ಏನಾಗುತ್ತೆ..?

ಈಗಾಗ್ಲೇ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಬಿಜೆಪಿ ತ್ಯಜಿಸಿ ಮರಳಿ ಕಾಂಗ್ರೆಸ್ ಸೇರಿದ್ರು. ಇದೀಗ ಮತ್ತೊಬ್ಬ ಮಾಜಿ ಸಚಿವ ಎ.ಬಿ ಮಾಲಕರೆಡ್ಡಿ ಮರಳಿ ಕಾಂಗ್ರೆಸ್​ ಸೇರುತ್ತಾರೆ ಎನ್ನಲಾಗ್ತಿದೆ. ಮಾಲಕರೆಡ್ಡಿ ತಮ್ಮ ಮಗಳು ಅನುರಾಗ ಹೆಸರಿನಲ್ಲಿ ಯಾದಗಿರಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್​ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಬಾರಿ ಇದೇ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮಾಲಕರೆಡ್ಡಿ ಸೋಲನುಭವಿಸಿದ್ದರು. ಲೋಕಸಭಾ ಚುನಾವಣೆ ವೇಳೆ ಈಗಿನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸೋಲಿಸಲು ಮಾಲಕರೆಡ್ಡಿ, ಚಿಂಚನಸೂರ್ ಹಾಗೂ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ತ್ಯಜಿಸಿದ್ದರು. ಕಾಂಗ್ರೆಸ್​​ನಿಂದ ಐದು ಬಾರಿ ಶಾಸಕರಾಗಿ ಒಂದು ಬಾರಿ ಸಚಿವರಾಗಿದ್ದ ಮಾಲಕರೆಡ್ಡಿ ಈ ಬಾರಿ ತಮ್ಮ ಮಗಳನ್ನು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿಸಲು ಚಿಂತನೆ ಮಾಡಿದ್ದಾರೆ.

suddiyaana