ಮೈಸೂರು – ಕೊಡಗು ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಒಡೆಯರ್..? ಕುತೂಹಲ ಮೂಡಿಸಿದ ಯದುವೀರ್ ಶಾರದಾಂಬೆ ದರ್ಶನ

ಮೈಸೂರು – ಕೊಡಗು ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರಾ ಒಡೆಯರ್..? ಕುತೂಹಲ ಮೂಡಿಸಿದ ಯದುವೀರ್ ಶಾರದಾಂಬೆ ದರ್ಶನ

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಹೆಸರು ಕೇಳಿ ಬರುತ್ತಿರುವ ಬೆನ್ನಲ್ಲೇ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಟೆಂಪಲ್‌ ರನ್‌ ಶುರು ಮಾಡಿದ್ದಾರೆ. ಸೋಮವಾರ ಬೆಳ್ಳಂಬೆಳಗ್ಗೆ ಯದುವೀರ್‌ ಅವರು ಶೃಂಗೇರಿಯ ಶ್ರೀಮಠಕ್ಕೆ ಭೇಟಿ ನೀಡಿ ಶಾರದಾಂಬೆ ದರ್ಶನ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಲೋಕಸಭೆ ಚುನಾವಣೆಗೆ ನಾನು, ನನ್ನ ಪುತ್ರ ಸ್ಪರ್ಧಿಸಲ್ಲ – ಪ್ರಕಾಶ್ ಹುಕ್ಕೇರಿ

ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದರಾಗಿರುವ ಪ್ರತಾಪ್‌ ಸಿಂಹ ಅವರಿಗೆ ಈ ಬಾರಿ ಟಿಕೆಟ್‌ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಾರಿ ಅವರ ಜಾಗಕ್ಕೆ ಯದುವೀರ್‌ ಒಡೆಯರ್‌ ಅವರನ್ನು ಕಣಕ್ಕೆ ಇಳಿಸಲು ಚಿಂತನೆ ನಡೆಸಿದೆ. ಈಗಾಗಲೇ ಯದುವೀರ್‌ ಒಡೆಯರ್‌ ಅವರನ್ನು ಬಿಜೆಪಿ ಸಂಪರ್ಕಿಸಿದ್ದು ಸ್ಪರ್ಧಿಸಲು ಒಪ್ಪಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಇದೀಗ ಅವರು ಶಾರದಾಂಬೆ ದರ್ಶನ ಪಡೆದಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.

ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ದೇವಿಯ ದರ್ಶನ ಪಡೆದ ಬಳಿಕ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾದರು. ಕಿರಿಯ ಜಗದ್ಗುರು ವಿಧುಶೇಖರ ಭಾರತೀ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು. ಶೃಂಗೇರಿಯ ಶ್ರೀಮಠಕ್ಕೂ ಹಾಗೂ ಮೈಸೂರು ಸಂಸ್ಥಾನಕ್ಕೂ ಇತಿಹಾಸ ಕಾಲದಿಂದಲೂ ಅವಿನಾಭವ ಸಂಬಂಧವಿದೆ.

ಹೀಗಾಗಿ ಮೈಸೂರು ಸಂಸ್ಥಾನದವರು ಶ್ರೀಮಠಕ್ಕೆ ಭೇಟಿ ನೀಡುವುದು ಮೊದಲನಿಂದಲೂ ನಡೆದುಕೊಂಡು ಬಂದಿದ್ದರಿಂದ ಮಠದ ಹಲವು ಕಾರ್ಯಕ್ರಮಗಳಲ್ಲಿ ಮೈಸೂರು ರಾಜವಂಶಸ್ಥರು‌ ಭಾಗಿಯಾಗುತ್ತಿದ್ದರು.

Shwetha M