ಹಾಸನದಲ್ಲಿ ಮಹಿಳೆ ಮೇಲೆ ಕಾಡಾನೆ ಅಟ್ಯಾಕ್ – ಅಮ್ಮ ಸೇಫ್ ಮಗಳು ಬ*ಲಿ!

ಹಾಸನದಲ್ಲಿ ಕಾಡಾನೆ ದಾಳಿಗೆ ಮೊತ್ತೊಂದು ಬಲಿಯಾಗಿದೆ. ಜಿಲ್ಲೆಯ ಸಕಲೇಶಪುರ ತಾಲೂಕಿನ ಮುಗುಲಿ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಶೋಭಾ (40) ಮೃತ ಮಹಿಳೆ. ಮಂಗಳವಾರ ಬೆಳಗ್ಗೆ ಕಾಫಿ ತೋಟದಲ್ಲಿ ಕೆಲಸಕ್ಕೆ ಹೋಗಿದ್ದಾಗ ಕಾಡಾನೆ ದಾಳಿ ಮಾಡಿದೆ. ಶೋಭಾ ಅವರನ್ನು ಬೆನ್ನಟ್ಟಿ ತುಳಿದು ಸಾಯಿಸಿದೆ. ಸ್ಥಳಕ್ಕೆ DFI ಸೌರಭ್ ಕುಮಾರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆನೆಯು ಇತ್ತೀಚೆಗೆ ಕೊಡಗಿನಿಂದ ಹಾಸನದತ್ತ ಬಂದಿತ್ತು ಎನ್ನಲಾಗುತ್ತಿದೆ.
ಇದನ್ನೂ ಓದಿ: ಸಿಂಹಿಣಿಯರ ಗರ್ಜನೆಗೆ ಶರಣಾದ UP – ಡಾಟ್ ಬಾಲ್ ನಲ್ಲೇ ಬೇಟೆಯಾಡಿದ ಬೆಲ್
ಮೃತ ಶೋಭಾ ಅವರು ಒಂದೂವರೆ ಎಕರೆ ಕಾಫಿ ತೋಟವನ್ನು ಹೊಂದಿದ್ದು, ಅವರ ತಾಯಿ ರಾಜಮ್ಮ ಕೂಡ ಜತೆಯಲ್ಲಿ ಹೋಗಿದ್ದರು. ಇಬ್ಬರೂ ನಡೆದುಕೊಂಡು ಹೋಗುತ್ತಿದ್ದ ವೇಳೆ ಆನೆ ದಾಳಿ ಮಾಡಿದೆ. ರಾಜಮ್ಮ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಆನೆಯು ಶೋಭಾ ಅವರನ್ನು ಕಾಲು ಕೆಳಗೆ ಹಾಕಿ ತುಳಿದಿದ್ದರಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.
ಇನ್ನು ಕಾಡಾನೆಗಳ ಹಾವಳಿ ಹೆಚ್ಚಳವಾಗಿರುವ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಹಿಳೆಯ ಮೃತದೇಹ ಎತ್ತಲೂ ಬಿಡದೆ ಗ್ರಾಮಸ್ಥರು ಪ್ರತಿಭಟನೆ ಮಾಡುತ್ತಿದ್ದಾರೆ. ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಗ್ರಾಮಸ್ಥರು ಧರಣಿ ಮಾಡುತ್ತಿದ್ದಾರೆ. ಮೃತ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಅಂತ ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

ನೋಡಿರಿ

