ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆ ಸಾವು!

ಆಕೆ ಎಂದಿನಂತೆ ಕೆಲಸಕ್ಕೆ ಕಾರ್ಖಾನೆಗೆ ತೆರಳಿ ಕೆಲಸದಲ್ಲಿ ಮಗ್ನಳಾಗಿದ್ದಳು. ಆ ವಿಧಿಯ ಆಟ ಬಲ್ಲವರಾರು. ಕಾರ್ಖಾನೆಯಲ್ಲೇ ಯಮರಾಜ ಕಾದು ಕುಳಿತಿದ್ದ. ಕೆಲಸಕ್ಕೆ ಹೋದ ಮಹಿಳೆ ಕೆಲವೇ ಗಂಟೆಗಳಲ್ಲಿ ಕಾರ್ಖಾನೆಯಲ್ಲೇ ಶವವಾಗಿದ್ದಾಳೆ. ಇದೀಗ ಇಡೀ ಕುಟುಂಬವೇ ಶೋಕ ಸಾಗರದಲ್ಲಿ ಮುಳುಗಿದೆ.
ಅಷ್ಟಕ್ಕೂ ಆಗಿದ್ದೇನು?
ಶ್ವೇತಾ (34) ಎಂಬ ಮಹಿಳೆ ತನ್ನ ಗಂಡ ಮತ್ತು ಮಗನ ಜೊತೆ ಶ್ವೇತಾ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಆಕೆ ನೆಲಗದರನಹಳ್ಳಿಯ ಪೇಯಿಂಗ್ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ಸೇರಿದ್ದಳು. ಎಂದಿನಂತೆ ಅವತ್ತು ಕೂಡ ಕೆಲಸಕ್ಕೆ ಹೋಗಿದ್ದಳು. ಈ ವೇಳೆ ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಸಾವನ್ನಪ್ಪಿದ್ದಾಳೆ.
ಇದನ್ನೂ ಓದಿ: ರೈಲು ಹಳಿಯ ಬಳಿ 2.5 ಮಿಲಿಯನ್ ಡಾಲರ್ ಪತ್ತೆ ಕೇಸ್ಗೆ ಟ್ವಿಸ್ಟ್! – ಹೆಬ್ಬಾಳ ಪೊಲೀಸರು ದೆಹಲಿಗೆ ತೆರಳಿದ್ದೇಕೆ?
ಬಣ್ಣ ಗಟ್ಟಿಯಾಗುತ್ತಿದ್ದರಿಂದ ಪರಿಶೀಲಿಸಲು ಮಿಕ್ಸರ್ ಬಳಿ ಬಂದು ಬಗ್ಗಿದಾಗ ಈ ಅವಘಡ ಸಂಭವಿಸಿದೆ. ಜಡೆ ಸಿಲುಕಿದಾಗ ಮಹಿಳೆ ಕೂಗಿಕೊಂಡರೂ ಮಿಕ್ಸರ್ ಶಬ್ದದಿಂದಾಗಿ ಯಾರಿಗೂ ಕೇಳಿಸಿಲ್ಲ. ಬಳಿಕ ಉಳಿದ ಕೆಲಸಗಾರರು ಮಿಕ್ಸರ್ ಬಳಿ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.