ನೋವು ತೋಡಿಕೊಂಡ ಬಡ ಮಹಿಳೆಗೆ ಸತಃ ತಾನೇ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!

ನೋವು ತೋಡಿಕೊಂಡ ಬಡ ಮಹಿಳೆಗೆ ಸತಃ ತಾನೇ ಶಸ್ತ್ರಚಿಕಿತ್ಸೆ ಮಾಡಿದ ಕಾಂಗ್ರೆಸ್ ಶಾಸಕ!

ತುಮಕೂರು: ಶಾಸಕರ ಬಳಿ ಆರೋಗ್ಯ ಸಮಸ್ಯೆ ಹೇಳಿಕೊಳ್ಳಲು ಬಂದ ಬಡ ಮಹಿಳೆಯೊಬ್ಬರಿಗೆ ಕುಣಿಗಲ್‌ ಶಾಸಕ ಡಾ.ರಂಗನಾಥ್ ಅವರು ಸ್ವತಃ ತಾವೇ ಶಸ್ತ್ರಚಿಕಿತ್ಸೆ ಮಾಡಿ ಮಾನವೀಯತೆ ಮೆರೆದಿದ್ದಾರೆ. ಇವರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಕುಣಿಗಲ್‌ ತಾಲೂಕಿನ ಕುಂದೂರು ಗ್ರಾಮದ ಶಾಸಕ ಆಶಾ ಮಹಿಳೆ ತನಗೆ ಕೀಲು ನೋವಿದೆ. ಚಿಕಿತ್ಸೆಗಾಗಿ ಬರೋಬ್ಬರಿ 4 ರಿಂದ 5 ಲಕ್ಷ ರೂಪಾಯಿ ಖರ್ಚಾಗುತ್ತದೆ ಎಂದು ಶಾಸಕ ಡಾ.ರಂಗನಾಥ್ ಅವರ ಬಳಿ ಹೇಳಿಕೊಂಡಿದ್ದಾರೆ. ಇದಕ್ಕೆ ಸ್ಪಂದಿಸಿದ ರಂಗನಾಥ್‌ ಅವರುಕೊನೆಗೆ ಮಹಿಳೆಯನ್ನು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಗೆ ದಾಖಲಿಸಿ ಉಚಿತವಾಗಿ ಸ್ವತಃ ತಾವೇ ಆಪರೇಷನ್ ಮಾಡಿದ್ದಾರೆ.

ಇದನ್ನೂ ಓದಿ:‌ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸೇನೆಗೆ ಪ್ರತಿಭಟನಾನಿರತ ಮಹಿಳೆಯರೇ ಸವಾಲು

ಆಶಾ ಅವರು ಕಳೆದ 10 ವರ್ಷದ ಹಿಂದೆ ಯಶಸ್ವಿನಿ ಯೋಜನೆಯಲ್ಲಿ ಕೀಲು ಆಪರೇಷನ್ ಮಾಡಿಕೊಂಡಿದ್ದರು. ಆದರೆ ಅದು ಡಿಸ್ ಲೊಕೆಟ್ ಆಗಿತ್ತು. ಇದೀಗ ಅದಕ್ಕೆ ಶಸ್ತ್ರಚಿಕಿತ್ಸೆ ಮಾಡಲು 4 ರಿಂದ 5 ಲಕ್ಷ ರೂ. ಬೇಕಿತ್ತು. ಇನ್ನು ಸರ್ಕಾರದ ಉಚಿತ ಯೋಜನೆಯಲ್ಲಿ ಒಂದೇ ಕಾಯಿಲೆಗೆ ಎರಡು ಬಾರಿ ಸರ್ಜರಿಗೆ ಅವಕಾಶ ಇರಲಿಲ್ಲ. ಸ್ವತಃ ರೋಗಿಗಳೇ ಹಣ ಸಂದಾಯ ಮಾಡಿ ಆಪರೇಷನ್ ಮಾಡಿಸಿಕೊಳ್ಳಬೇಕಿತ್ತು. ಈ ಹಿನ್ನೆಲೆಯಲ್ಲಿ ಆಶಾ ತನ್ನ ಆರ್ಥಿಕ ಸಂಕಷ್ಟವನ್ನು  ಅರಿತ ಶಾಸಕ ರಂಗನಾಥ್​ ಬಳಿ ಹೇಳಿಕೊಂಡಿದ್ದರು. ಆಶಾಳ ಮನವಿಗೆ ಸ್ಪಂದಿಸಿದ ರಂಗನಾಥ್​ ಸ್ವತಃ ತಾವೇ ಸರ್ಜರಿ ಮಾಡಿದ್ದಾರೆ.

ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿರುವ ಶಾಸಕ ರಂಗನಾಥ್, ಇದೀಗ ಮಹಿಳೆಯ ಕೀಲು ಸರ್ಜರಿ ಮಾಡಿ ಸೈ ಎನಿಸಿಕೊಂಡಿದ್ದಾರೆ. ಇನ್ನು ಮಹಿಳೆ ಆಶಾಳ ಹಣವನ್ನೂ ಸಹ ಉಳಿಸಿದ್ದಾರೆ. ಹೀಗಾಗಿ ಶಾಸಕರ ಸೇವೆಗೆ ಶ್ಲಾಘನೆ ವ್ಯಕ್ತವಾಗಿದೆ.

ಅಲ್ಲದೇ ಇದೇ ರೀತಿಯ ಸಮಸ್ಯೆಯಿಂದ ಬಳಲುತ್ತಿರುವ 23 ಮಹಿಳೆಯರಿಗೆ ಕುಣಿಗಲ್ ಶಾಸಕ ಡಾ.ರಂಗನಾಥ್ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಲು ಮುಂದಾಗಿದ್ದಾರೆ. ಶಾಸಕರು ಮೂಲತಃ ಆರ್ಥೋಪೆಡಿಕ್ ವೈದ್ಯರಾಗಿದ್ದಾರೆ. ಶಾಸಕರ ಈ ಸೇವೆಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

suddiyaana