ಉಚಿತ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಫೈಟಿಂಗ್! – ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು!

ಉಚಿತ ಬಸ್‌ನಲ್ಲಿ ಸೀಟಿಗಾಗಿ ಮಹಿಳೆಯರ ಫೈಟಿಂಗ್! – ಚಪ್ಪಲಿಯಿಂದ ಹೊಡೆದಾಡಿಕೊಂಡ ಪ್ರಯಾಣಿಕರು!

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರವೇ ಶಕ್ತಿ ಯೋಜನೆಯನ್ನು ಜಾರಿಗೊಳಿಸಿ ಉಚಿತ ರಾಜ್ಯ ಎಲ್ಲ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ನಿತ್ಯ ಲಕ್ಷಾಂತರ ಮಂದಿ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾರೆ. ಇದೀಗ ಬಸ್‌ ಸೀಟಿಗಾಗಿ ಮಹಿಳೆಯರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಇದರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಭಾರತಕ್ಕೆ ಬರೋದು ಡೌಟ್? – ಫ್ಲೈಟ್‌ ಟಿಕೆಟ್ ರದ್ದು.. ಹಣ ವಾಪಸ್ ಪಡೆಯದೆ ಗೊಂದಲ ಸೃಷ್ಟಿಸಿದ  ನಡೆ

ಈ ಘಟನೆ ಬೀದರ್‌ನಿಂದ ಕಲಬುರಗಿಗೆ ಹೊರಟ ಬಸ್‌ನಲ್ಲಿ ನಡೆದಿದೆ ಎಂದು ಹೇಳಲಾಗುತ್ತಿದೆ. ಇಬ್ಬರು ಮಹಿಳೆಯರು ಬೀದರ್‌ನಲ್ಲಿ ಬಸ್‌ಗೆ ಹತ್ತಿದ್ದಾರೆ. ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್‌ ಪಡೆದ ಬಳಿಕ ಮಹಿಳೆಯರು ಸೀಟಿಗಾಗಿ ಕಿತ್ತಾಟ ನಡೆಸಿದ್ದಾರೆ. ಓರ್ವ ಮಹಿಳೆ, “ಸೀಟು ಬಿಡು, ಇದು ನನ್ನದು” ಎಂದು ಹೇಳಿದ್ದರೆ ಮತ್ತೊಬ್ಬಳು, “ನಾನು ಸೀಟ್‌ ಬಿಡಲ್ಲ. ಏನ್‌ ಮಾಡ್ತಿ” ಎಂದು ಪ್ರಶ್ನಿಸಿದ್ದಾಳೆ.

ಇಬ್ಬರು ಪರಸ್ಪರ ಮಾತಿನಲ್ಲಿ ಜಗಳ ಮಾಡುತ್ತಿದ್ದರು. ತದನಂತರ ಮಾತಿಗೆ ಮಾತು ಬೆಳೆದಿದ್ದು, ಓರ್ವ ಮಹಿಳೆ ತನ್ನ ಚಪ್ಪಲಿಯಿಂದ ಮಹಿಳೆ ಹೊಡೆದಿದ್ದಾಳೆ. ಚಪ್ಪಲಿ ಹಲ್ಲೆ ಬಳಿಕ ಮೈಮೇಲೆ ಹಾಕಿದ ಬಟ್ಟೆ ಹಿಡಿದು ಮಹಿಳೆಯರು ಎಳೆದಾಡಿಕೊಂಡಿದ್ದಾರೆ. ಮಹಿಳೆಯ ಹೊಡೆದಾಟದ ವಿಡಿಯೋವನ್ನು ಬಸ್‌ ಪ್ರಯಾಣಿಕರು ರೆಕಾರ್ಡ್‌ ಮಾಡಿದ್ದರು. ಇದೀಗ ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Shwetha M