ಮಾರ್ಚ್ 8ರೊಳಗೆ ಮಹಿಳೆಯರ ಖಾತೆಗೆ 2500 ಹಣ- ಬರವಸೆ ನೀಡಿದ ಸಿಎಂ

ಮಾರ್ಚ್ 8ರೊಳಗೆ ಮಹಿಳೆಯರ ಖಾತೆಗೆ 2500 ಹಣ-  ಬರವಸೆ ನೀಡಿದ ಸಿಎಂ

ದೆಹಲಿಯ ಸಿಎಂ ಗದ್ದುಗೆಯನ್ನ ರೇಖಾ ಗುಪ್ತ ಎರಿದ್ದಾರೆ. ಬಿಜೆಪಿ ಸರ್ಕಾರವು ಮಹಿಳೆಯರಿಗೆ ಮಾಸಿಕ 2,500 ರೂ. ಆರ್ಥಿಕ ನೆರವು ನೀಡುವ ಚುನಾವಣಾ ಭರವಸೆಯನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ರೇಖಾ ಗುಪ್ತಾ  ಭರವಸೆ ನೀಡಿದ್ದಾರೆ.

ಮಹಿಳೆಯವರಿಗೆ ಮಾಸಿಕ 2500 ಆರ್ಥಿಕ ನೆರವು ನೀಡುವ ಚುನಾವಣಾ ಭರವಸೆಯನ್ನು ಬಿಜೆಪಿ ಸರ್ಕಾರದ  ನೀಡಿತ್ತು. ಈಗ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಮೊದಲ ಕಂತನ್ನು ಮಾರ್ಚ್ 8 ರೊಳಗೆ ಅವರ ಖಾತೆಗಳಿಗೆ ಜಮಾ ಮಾಡಲಾಗುವುದು ಎಂದು ದೆಹಲಿ  ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ತಿಳಿಸಿದ್ದಾರೆ.

ಇದನ್ನ ಓದಿ: ದೆಹಲಿ ಸಿಎಂ ಆಗಿ ರೇಖಾ ಗುಪ್ತಾ ಪ್ರಮಾಣ ವಚನ – ರಾಷ್ಟ್ರ ರಾಜಧಾನಿಯಲ್ಲಿ ಮಹಿಳೆಯರ ದರ್ಬಾರ್

ಮೋದಿಯವರ ಕನಸನ್ನು ನನಸಾಗಿಸುವುದು ರಾಜಧಾನಿಯಲ್ಲಿರುವ ಎಲ್ಲಾ 48 ಬಿಜೆಪಿ ಶಾಸಕರ ಜವಾಬ್ದಾರಿಯಾಗಿದೆ. ಮಹಿಳೆಯರಿಗೆ ಆರ್ಥಿಕ ನೆರವು ಸೇರಿದಂತೆ ನಮ್ಮ ಎಲ್ಲಾ ಭರವಸೆಗಳನ್ನು ನಾವು ಖಂಡಿತವಾಗಿಯೂ ಈಡೇರಿಸುತ್ತೇವೆ. ಮಾರ್ಚ್ 8 ರೊಳಗೆ ಮಹಿಳೆಯರಿಗೆ ಅವರ ಖಾತೆಗಳಿಗೆ 100 ಪ್ರತಿಶತದಷ್ಟು ಹಣಕಾಸಿನ ನೆರವು ಸಿಗುತ್ತದೆ ಎಂದು ರೇಖಾ ಗುಪ್ತಾ ಅವರು ಹೇಳಿದ್ದಾರೆ.

ಮಾರ್ಚ್ 8 ಅನ್ನು ಅಂತರರಾಷ್ಟ್ರೀಯ ಮಹಿಳಾ ದಿನವೆಂದು ಆಚರಿಸಲಾಗುತ್ತದೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿತು, 70 ಸ್ಥಾನಗಳಲ್ಲಿ 48 ಸ್ಥಾನಗಳನ್ನು ಗೆದ್ದಿತು ಮತ್ತು ಎಎಪಿಯ ದಶಕದ ಆಳ್ವಿಕೆಯನ್ನು ಕೊನೆಗೊಳಿಸಿತು. ಕಾಂಗ್ರೆಸ್‌ ಒಂದು ಕ್ಷೇತ್ರದಲ್ಲೂ ಗೆಲುವು ಸಾಧಿಸದೇ ಹೀನಾಯವಾಗಿ ಸೋಲು ಅನುಭವಿಸಿದೆ. ಹೀಗಾಗಿ ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರವಿದ್ದು, ಹೇಗೆಲ್ಲಾ ಡೆವಲಪ್ ಆಗುತ್ತೆ ಅನ್ನೋದನ್ನ ನೋಡಬೇಕಿದೆ.

Kishor KV

Leave a Reply

Your email address will not be published. Required fields are marked *