ಇಂದು ಭಾರತ ಮಹಿಳಾ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ- T20ವಿಶ್ವಕಪ್ ಸೆಮಿ ಫೈನಲ್ ಎಂಟ್ರಿಗೆ ಲಾಸ್ಟ್ ಚಾನ್ಸ್

ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸುತ್ತಿನ ಪಂದ್ಯಗಳು ಇದೀಗ ರೋಚಕ ಘಟ್ಟಕ್ಕೆ ತಲುಪಿದೆ. ಇಂದು ಲಾರ್ಡ್ಸ್ ಮೈದಾನದಲ್ಲಿ ನಡೆಯಲಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಗ್ರೂಪ್ ‘ಎ’ ಅಂತಿಮ ಲೀಗ್ ಪಂದ್ಯ ಟೀಂ ಇಂಡಿಯಾದ ಭವಿಷ್ಯ ನಿರ್ಧರಿಸಲಿದೆ. ಈ ಪಂದ್ಯದಲ್ಲಿ ಭಾರತ ಗೆದ್ರೆ ಸೆಮಿಗೆ ಎಂಟ್ರಿಕೊಡಲಿದೆ. ಒಂದು ವೇಳೆ ಸೋತ್ರೆ ಸೌತ್ ಆಫ್ರಿಕಾ ತಂಡದ ಸೋಲು ಗೆಲುವಿನ ಮೇಲೆ ಭಾರತ ಭವಿಷ್ಯ ನಿರ್ಧಾರ ಆಗಲಿದೆ. ಹೀಗಾಗಿ ಭಾರತ ತಂಡಕ್ಕೆ ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.
ಮಹಿಳಾ ಟಿ20 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯುವ ಗುರಿಯೊಂದಿಗೆ, ಇಂದು ನಡೆಯಲಿರುವ ಲೀಗ್ ಹಂತದದ ತನ್ನ ಕೊನೆಯ ಗ್ರೂಪ್ ಎ ಪಂದ್ಯದಲ್ಲಿ ಭಾರತ ತಂಡ ಆರು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಇದೇ ದಿನ ದಕ್ಷಿಣ ಆಫ್ರಿಕಾ ಲಾರ್ಡ್ಸ್‌ನಲ್ಲಿ ಬಾಂಗ್ಲಾದೇಶ ತಂಡವನ್ನು ಎದುರಿಸಲಿದೆ. ದಿನದ ಎರಡು ಪಂದ್ಯಗಳು ಸೆಮಿಫೈನಲ್ ಭವಿಷ್ಯವನ್ನು ನಿರ್ಧರಿಸಲಿದೆ.
ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಹವಾ ಎಬ್ಬಿಸಿದ ಕಿಚ್ ಸುದೀಪ್ ಕ್ಯಾರವನ್ – 6.5 ಕೋಟಿ ಕ್ಯಾರವನ್ ವಿಶೇಷತೆಯೇನು ಗೊತ್ತಾ?
ಈಗಾಗಲೇ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಹಲವು ಕ್ಯಾಚ್ ಕೈಬಿಟ್ಟು ಸೋಲಿಗೆ ತುತ್ತಾಗಿದ್ದರು. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಗೆದ್ದರೂ 6 ಕ್ಯಾಚ್‌ಗಳನ್ನು ಬಿಟ್ಟಿದ್ದರು. ಹೀಗಾಗಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧವೂ ಇದೇ ತಪ್ಪು ಮರುಕಳಿಸಿದರೆ ಸೋಲು ಕಟ್ಟಿಟ್ಟ ಬುತ್ತಿ. ಆರಂಭಿಕ ಎರಡು ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ಸ್ಮೃತಿ ಮಂಧಾನ ಅವರ ಬ್ಯಾಟಿಂಗ್ ಆ ಬಳಿಕ ಮಂಕಾಗಿದೆ. ಶಫಾಲಿ ಮಾತ್ರ ಬ್ಯಾಟಿಂಗ್ ಜತೆಗೆ ಬೌಲಿಂಗ್‌ನಲ್ಲಿಯೂ ತಂಡಕ್ಕೆ ನೆರವಾಗುತ್ತಿದ್ದಾರೆ. ಶ್ರೀ ಶರಣಿ ನಿರೀಕ್ಷಿತ ಪ್ರದರ್ಶನ ತೋರುತ್ತಿದ್ದಾರೆ. ಅವರ ಮೇಲೆ ತಂಡ ಹೆಚ್ಚಿನ ಭರವಸೆ ಇರಿಸಿದೆ. ಮಧ್ಯಮ ಕ್ರಮಾಂಕದಲ್ಲಿ ಹರ್ಮನ್‌ಪ್ರೀತ್ ಕೌರ್, ಜೆಮಿಮಾ ರೊಡ್ರಿಗಸ್ ಮತ್ತು ಯಸ್ತಿಕಾ ಭಾಟಿಯಾ ಕಳಪೆ ಫಾರ್ಮ್‌ನಿಂದ ಹೊರಬರಬೇಕಿದೆ. ಫಿನಿಶರ್‌ಗಳಾದ ರಿಚಾ ಘೋಷ್ ಮತ್ತು ದೀಪ್ತಿ ಶರ್ಮಾ ಹೆಚ್ಚಿನ ಕೊಡುಗೆ ಕೊಡಬೇಕಾಗಿದೆ.
ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯ
ಆಸ್ಟ್ರೇಲಿಯಾ ವಿರುದ್ಧ ಗೆದ್ದರೆ: ಭಾರತ ತಂಡವು ಬಲಿಷ್ಠ ಆಸ್ಟ್ರೇಲಿಯಾ ಪಡೆಯನ್ನು ಸೋಲಿಸಿದರೆ ಒಟ್ಟು 8 ಅಂಕಗಳನ್ನು ಪಡೆಯಲಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ನೆಟ್ ರನ್ ರೇಟ್ ಮತ್ತಷ್ಟು ಉತ್ತಮಗೊಳ್ಳುವುದರಿಂದ ಸೆಮಿಫೈನಲ್ ಸ್ಥಾನ ಬಹುತೇಕ ಖಚಿತವಾಗಲಿದೆ. ಆಸ್ಟ್ರೇಲಿಯಾ ವಿರುದ್ಧ ಸೋತರೆ: ಟೀಮ್ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ಸೋತರೆ ಸೆಮಿಫೈನಲ್ ರೇಸ್ನಿಂದ ಹೊರಬೀಳುವುದಿಲ್ಲ. ಬದಲಾಗಿ ಬಾಂಗ್ಲಾದೇಶ್ ವಿರುದ್ಧ ಸೌತ್ ಆಫ್ರಿಕಾ ತಂಡ ಸೋಲುವುದನ್ನು ಎದುರು ನೋಡಬೇಕು.

ನೋಡಿರಿ

