ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಟೀಮ್ IND ಅಬ್ಬರ – ನೆದರ್‌ಲ್ಯಾಂಡ್‌ಗೆ ಮಣ್ಣು ಮುಕ್ಕಿಸಿ ಟೇಬಲ್ ಟಾಪ್‌ಗೆ ಹೋದ ಭಾರತ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಅಬ್ಬರ ಪ್ರದರ್ಶನ ನೀಡುತ್ತಿದೆ. 95 ರನ್‌ಗಳಿಂದ ನೆದರ್‌ಲ್ಯಾಂಡ್ ತಂಡವನ್ನು ಮಣಿಸಿ, ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಬಡ್ತಿ ಪಡೆದಿದೆ.
ಇದನ್ನೂ ಓದಿ: ನಾಯಕನಾಗಿ ಗಿಲ್ ಮ್ಯಾಜಿಕ್ – ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿ ಗೆದ್ದ ಟೀಮ್ ಇಂಡಿಯಾ
ಟೀಮ್ ಇಂಡಿಯಾ ನೀಡಿದ್ದ 210 ರನ್‌ಗಳ ಗುರಿಯನ್ನು ಬೆನ್ನಟ್ಟಿದ ನೆದರ್‌ಲ್ಯಾಂಡ್ ತಂಡದ ಆಟಗಾರ್ತಿಯರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಟಾಪ್ ಆರ್ಡರ್ ಬ್ಯಾಟರ್‌ಗಳು ಹೀದರ್ ಸೀಗರ್ಸ್ 21, ಫೆಬೆ ಮೊಲ್ಕೆನ್‌ಬೋರ್ 15, ಬಾಬೆಟ್ಟೆ ಡಿ ಲೀಡೆ 28, ಸ್ಟೆರೆ ಕಾಲಿಸ್ 18 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಎಲ್ಲ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು. ಅಂತಿಮವಾಗಿ ನೆದರ್‌ಲ್ಯಾಂಡ್ 114 ರನ್‌ಳಿಗೆ ಆಲೌಟ್ ಆಯಿತು.
ಟೀಮ್ ಇಂಡಿಯಾದ ಪರ ನಂದಿನಿ ಶರ್ಮಾ 2, ಆಲ್‌ರೌಂಡರ್ ಶಫಾಲಿ ವರ್ಮಾ 3, ಶ್ರೀ ಚರಣಿ 4 ವಿಕೆಟ್ ಪಡೆದು ಗೆಲುವಿನಲ್ಲಿ ಮಿಂಚಿದರು. ಶತಕದ ಆರಂಭ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ, ಮಹಿಳಾ ಟಿ20 ವಿಶ್ವಕಪ್‌ನಲ್ಲಿ ದಾಖಲೆಯ ಮೊತ್ತ ಕಲೆಹಾಕಿತು. ಆರಂಭಿಕರಾದ ಶಫಾಲಿ ವರ್ಮಾ (55 ರನ್, 38 ಎಸೆತ) ಮತ್ತು ಉಪನಾಯಕಿ ಸ್ಮೃತಿ ಮಂಧಾನ (74 ರನ್, 47 ಎಸೆತ, 11 ಬೌಂಡರಿ, 1 ಸಿಕ್ಸರ್) ಮೊದಲ ವಿಕೆಟ್‌ಗೆ 11.4 ಓವರ್‌ಗಳಲ್ಲಿ 115 ರನ್‌ಗಳ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿದರು
ಮಧ್ಯಮ ಕ್ರಮಾಂಕದಲ್ಲಿ ಜೆಮಿಮಾ 19 ರನ್ ಹಾಗೂ ನಾಯಕಿ ಹರ್ಮನ್‌ಪ್ರೀತ್ ಕೌರ್ 12 ರನ್ ಗಳಿಸಿದರೆ, ರಿಚಾ ಘೋಷ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಂತಿಮವಾಗಿ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 209 ರನ್ ಸಿಡಿಸಿತು
ನೆದರ್‌ಲ್ಯಾಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿರುವ ಹರ್ಮನ್‌ಪ್ರೀತ್ ಕೌರ್ ಪಡೆ ಆಡಿದ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿ 4 ಅಂಕಗಳನ್ನು ಕಲೆ ಹಾಕಿದ್ದು, 3.975 ನೆಟ್ ರನ್‌ರೇಟ್‌ನೊಂದಿಗೆ ಅಗ್ರಸ್ಥಾನದಲ್ಲಿದೆ. ಇದೇ ಗುಂಪಿನಲ್ಲಿರುವ ಆಸ್ಟ್ರೇಲಿಯಾ ಆಡಿದ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, 3.875 ರನ್ ರೇಟ್‌ನೊಂದಿಗೆ ಎರಡನೇ ಸ್ಥಾನದಲ್ಲಿದೆ.

ನೋಡಿರಿ

