Word Power Is World Power – ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಪೋಸ್ಟ್‌!

Word Power Is World Power – ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕ ಪೋಸ್ಟ್‌!

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಸಿಎಂ ಬದಲಾವಣೆಯಾಗಬೇಕು ಎಂದು ಒಂದು ಬಣ ಹೇಳ್ತಿದ್ರೆ, ಮತ್ತೊಂದು ಬಣ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಹೇಳುತ್ತಿದ್ದಾರೆ. ಇದೀಗ ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ ಅಂಗಳದಲ್ಲಿದೆ. ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್‌ ಮಾರ್ಮಿಕ ಪೋಸ್ಟ್‌ ಹಾಕಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಅತಿಥಿಗಳ ಆರ್ಭಟಕ್ಕೆ ನೊಂದ ಗಿಲ್ಲಿ – ನಿನ್ನ ಜೊತೆ ನಾನಿದ್ದೀನಿ ಎಂದು ಮಾತು ಕೊಟ್ಟ ಅಶ್ವಿನಿ ಗೌಡ

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಾಕಿರುವ ಡಿಕೆ ಶಿವಕುಮಾರ್‌, Word power is world power ಎಂದು ಬರೆಯಲಾದ ತಮ್ಮ ಫೋಟೋ ಹಾಕಿದ್ದಾರೆ. ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ವರ್ಡ್ ಪವರ್ ಈಸ್ ವರ್ಲ್ಡ್ ಪವರ್. ಅದು ನ್ಯಾಯಾಧೀಶರಾಗಿರಲಿ, ಅಧ್ಯಕ್ಷರಾಗಿರಲಿ ಅಥವಾ ನಾನೂ ಸೇರಿದಂತೆ ಯಾರೇ ಆಗಿರಲಿ, ಆಡಿದ ಮಾತಿನಂತೆ ನಡೆದುಕೊಳ್ಳಬೇಕು ಎಂದು ಅವರು ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದಾಗಲೂ, ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಹೇಳಿದ್ದರು.

ಇನ್ನು ಬುಧವಾರವಷ್ಟೇ ಡಿಕೆ ಶಿವಕುಮಾರ್​ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ಲೀಸ್ ವೈಟ್ ಎಂಬ ಸಂದೇಶ ಕಳುಹಿಸಿದ್ದರು. ಇದು ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ನಂತರದಲ್ಲಿ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹಲವು ಕ್ಷಿಪ್ರ ಬೆಳವಣಿಗೆಗಳು ನಡೆದಿದ್ದವು. ಅದರ ಬೆನ್ನಲ್ಲೇ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಸಂದೇಶ ಪ್ರಕಟಿಸಿದ್ದಾರೆ.

ಈ ನಡುವೆ, ರಾಹುಲ್ ಗಾಂಧಿ ಜತೆ ಸಹ ಡಿಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಆ ಮಾತುಕತೆ ಗುಟ್ಟನ್ನು ಬಿಟ್ಟುಕೊಡ ಡಿಕೆ ಶಿವಕುಮಾರ್, ರಾಹುಲ್ ಗಾಂಧಿಯವರು ನನ್ನೊಂದಿಗೆ ಏನು ಸಂವಹನ ಮಾಡಿದ್ದಾರೆ ಎಂಬುದು ಮಾಧ್ಯಮದಲ್ಲಿ ಮಾತನಾಡುವ ವಿಚಾರವಲ್ಲ, ಹೇಳುವ ಅವಶ್ಯಕತೆಯೂ ಇಲ್ಲ ಎಂದಿದ್ದಾರೆ. ಆದರೆ, ತಮ್ಮ ಗುರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ 28 ಸೀಟು ಪಡೆಯುವುದು ಮತ್ತು ದೇಶದಲ್ಲಿ ರಾಹುಲ್ ಗಾಂಧಿಯವರನ್ನು ಪ್ರಧಾನ ಮಂತ್ರಿ ಮಾಡುವುದಾಗಿದೆ ಎಂದು ಹೇಳಿದ್ದಾರೆ.

Shwetha M