ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ..!

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ನೀರಜ್ ಚೋಪ್ರಾ..!

ಟೋಕಿಯೋ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ, ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅದ್ಭುತ ಪ್ರದರ್ಶನ ತೋರುವ ಮೂಲಕ ಮುಂಬರುವ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ನೀರಜ್‌ ಚೋಪ್ರಾ ಫೈನಲ್ ಗೆ ಅರ್ಹತೆ ಪಡೆದಿದ್ದಾರೆ.

ಇದನ್ನೂ ಓದಿ: WWE ಸ್ಟಾರ್ 36 ವರ್ಷದ ಬ್ರೇ ವ್ಯಾಟ್ ಹೃದಯಾಘಾತಕ್ಕೆ ಬಲಿ – ದೈತ್ಯ ಪ್ರತಿಭೆಯನ್ನ ಕಳೆದುಕೊಂಡು ಕುಸ್ತಿ ಲೋಕದ ಕಂಬನಿ     

ಹಂಗೇರಿಯ ಬುಡಾಪೆಸ್ಟ್‌ನಲ್ಲಿ ಶುಕ್ರವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2023 ರಲ್ಲಿ ಜಾವೆಲಿನ್​ ತಾರೆ ನೀರಜ್ ಚೋಪ್ರಾ ಅವರು 88.77 ಮೀಟರ್ ಎಸೆಯುವ ಮೂಲಕ ಫೈನಲ್‌ಗೆ ಪ್ರವೇಶಿಸಿದ್ದಾರೆ. ಹಾಗೇ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದಾರೆ.

ನೀರಜ್ ಚೋಪ್ರಾ ಅವರು ಕಳೆದ ವರ್ಷ ಅಮೆರಿಕದಲ್ಲಿ ನಡೆದಿದ್ದ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಈ ಬಾರಿ ಸುಧಾರಿತ ಪ್ರದರ್ಶನದೊಂದಿಗೆ ಚಿನ್ನ ಗೆಲ್ಲುವ ತವಕದಲ್ಲಿದ್ದಾರೆ.

suddiyaana