ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದು ಹೊಸ ದಾಖಲೆ ಸೃಷ್ಟಿಸಿದ ನೀರಜ್ ಚೋಪ್ರಾ!

ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇದು ವಿಶ್ವ ಅಥ್ಲೆಟಿಕ್ಸ್ ನಲ್ಲಿ ಭಾರತ ಜಯಿಸಿರುವ ಪ್ರಪ್ರಥಮ ಚಿನ್ನವಾಗಿದೆ.
ಭಾನುವಾರ ರಾತ್ರಿ ನಡೆದ ಫೈನಲ್‌ನಲ್ಲಿ ನೀರಜ್ ಚೋಪ್ರಾ ಅವರು 88.17 ಮೀಟರ್ ದೂರ ಭರ್ಜಿ ಎಸೆಯುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಎಂಬ ದಾಖಲೆ ನಿರ್ಮಿಸಿದ್ದಾರೆ.
ಇದನ್ನೂ ಓದಿ: ಕಾಲ್ಚೆಂಡಿನ ಚತುರನಿಗೆ ಹೆಚ್ಚಾಯ್ತು ಜೀವ ಬೆದರಿಕೆ – ಲೆಯೊನೆಲ್ ಮೆಸ್ಸಿ ಭದ್ರತೆಗೆ ನೇಮಕಗೊಂಡ ಹೊಸ ಬಾಡಿಗಾರ್ಡ್ ಯಾರು ಗೊತ್ತಾ?
ರವಿವಾರ ರಾತ್ರಿ ನಡೆದ ಫೈನಲ್‌ನಲ್ಲಿ ನೀರಜ್ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್ ಎಸೆಯುವ ಮೂಲಕ ಚಿನ್ನದ ಪದಕ ಗೆದ್ದರು. ಪಾಕಿಸ್ಥಾನದ ಅರ್ಷದ್ ನದೀಮ್ 87.82 ಮೀ. ದೂರಕ್ಕೆ ಎಸೆದು ದ್ವಿತೀಯ ಸ್ಥಾನಿಯಾದರು.
ಇನ್ನು ಭಾರತದವರೇ ಆದ ಕಿಶೋರ್ ಜನಾ 5ನೇ ಸ್ಥಾನ ಗಳಿಸಿಕೊಂಡಿದ್ದಾರೆ. ಇವರು ತಮ್ಮ ವೃತ್ತಿಜೀವನ ದಾಖಲೆ 84.77 ಮೀ. ದೂರ ಜಾವೆಲಿನ್ ಎಸೆದರು. ತಮ್ಮ 5ನೇ ಪ್ರಯತ್ನದಲ್ಲಿ ಈ ದಾಖಲೆ ಮಾಡಿದ್ದಾರೆ.
ಭಾರತದ ಇನ್ನೋರ್ವ ಸ್ಪರ್ಧಿ ಡಿ.ಪಿ.ಮನು ಆರನೇ ಸ್ಥಾನ ಗಳಿಸಿದ್ದಾರೆ. ಭಾರತದ ಇತಿಹಾಸದಲ್ಲಿ ಅಗ್ರ 8ರಲ್ಲಿ ಮೂವರು ಸ್ಥಾನ ಪಡೆದಿರುವುದು ಕೂಡ ಇದೇ ಮೊದಲು.