ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ದುರಂತ – ವಿಷ ಗಾಳಿ ಸೇವಿಸಿ ಮೂವರು ಕಾರ್ಮಿಕರು ಸಾವು

ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ದುರಂತ – ವಿಷ ಗಾಳಿ ಸೇವಿಸಿ ಮೂವರು ಕಾರ್ಮಿಕರು ಸಾವು

ಕಲ್ಯಾಣ ಕರ್ನಾಟಕ ಭಾಗದ ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ದುರಂತ ನಡೆದಿದೆ.  ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ ಸೋರಿಕೆಯು ಮೂವರು ಅಮಾಯಕ ಕಾರ್ಮಿಕರ ಪ್ರಾಣ ಬಲಿ ಪಡೆದಿದ್ದು, ಕೈಗಾರಿಕಾ ಸುರಕ್ಷತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.

ಇದನ್ನೂ ಓದಿ: ಮಂಗಳೂರು ಖಾಸಗಿ ಕಾಲೇಜಿನಲ್ಲಿ Ragging ಅಟ್ಟಹಾಸ – ಬಟ್ಟೆ ಬಿಚ್ಚಿಸಿ ಕಿರುಕುಳ ಕೊಟ್ಟ ಕೇರಳ ವಿದ್ಯಾರ್ಥಿಗಳು

ಕಡೇಚೂರು ಕೈಗಾರಿಕಾ ಪ್ರದೇಶದಲ್ಲಿರುವ ಸಿಲ್ ಲ್ಯಾಬೋರೇಟರಿ ಔಷಧ ತಯಾರಿಕಾ ಕಾರ್ಖಾನೆಯಲ್ಲಿ ಈ ದುರಂತ ನಡೆದಿದೆ. ಬುಧವಾರ ಮುಂಜಾನೆ ಸುಮಾರು 5 ಗಂಟೆಯ ಸುಮಾರಿಗೆ ಎಂದಿನಂತೆ ಕೆಲಸಗಾರರು ತಮ್ಮ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ, ಕಾರ್ಖಾನೆಯ ಯಂತ್ರಗಾರವೊಂದರಿಂದ ಇದ್ದಕ್ಕಿದ್ದಂತೆ ರಾಸಾಯನಿಕ ಅನಿಲ ಸೋರಿಕೆಯಾಗಿದೆ. ಸೋರಿಕೆಯಾದ ಅನಿಲದ ತೀವ್ರತೆಗೆ ವಿಷಕಾರಿ ವಾತಾವರಣ ಸೃಷ್ಟಿಯಾದ ಪರಿಣಾಮ, ಕೆಲಸದಲ್ಲಿದ್ದ ಮೂವರು ಕಾರ್ಮಿಕರು ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.

ಜಿಲ್ಲೆಯ ಬಾಡಿಯಾಳ–ಕಡೆಚೂರು ಕೈಗಾರಿಕಾ ಪ್ರದೇಶದಲ್ಲಿರುವ ಕೈಗಾರಿಕೆಯಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ವಿಷಕಾರಿ ರಾಸಾಯನಿಕ ಸೋರಿಕೆ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕೈಗಾರಿಕೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಏಕಾಏಕಿ ವಿಷಕಾರಿ ಅನಿಲ ಸೋರಿಕೆಯಾಗಿದ್ದು, ಅದರ ಪರಿಣಾಮ ಐವರು ಕಾರ್ಮಿಕರು ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇನ್ನಿಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ನೆರೆಯ ತೆಲಂಗಾಣ ರಾಜ್ಯದ ಮಹಬೂಬ್‌ನಗರ ಜಿಲ್ಲೆಯ ಆಲಂಪಳ್ಳಿ ಗ್ರಾಮದ ಕಟ್ಲಾ ಗಣೇಶ್ , ಮಧ್ಯೆ ಪ್ರದೇಶ ರಾಜ್ಯದ ವಿಕ್ರಮ್ ಸಿಂಗ್ ಗೋಂಡ, ಸಂಜಯ್ ಸಿಂಗ್ ಗೋಂಡ ಮೃತಪಟ್ಟ ಕಾರ್ಮಿಕರು ಎಂದು ಗುರುತಿಸಲಾಗಿದೆ. ಮಂಚಾಲ ಹೆಮಂತ್, ಮಂಚಾಲ ಶಿವಕುಮಾರ್ ಗಂಭೀರವಾಗಿ ಗಾಯಗೊಂಡಿರುವುರಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ, ಎಸ್ಪಿ ಪೃಥ್ವಿಕ್ ಶಂಕರ್ ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Kishor KV

Leave a Reply

Your email address will not be published. Required fields are marked *