ಮೊದಲ ಸಿನಿಮಾದಲ್ಲಿ ಸೋತ್ರು ಛಲ ಬಿಡದ ಪುಷ್ಪ – ಯಶ್‌ ತಾಯಿ ಹೊಸ ಚಿತ್ರ ಘೋಷಣೆ!

ಮೊದಲ ಸಿನಿಮಾದಲ್ಲಿ ಸೋತ್ರು ಛಲ ಬಿಡದ ಪುಷ್ಪ – ಯಶ್‌ ತಾಯಿ ಹೊಸ ಚಿತ್ರ ಘೋಷಣೆ!

ರಾಕಿಂಗ್ ಸ್ಟಾರ್ ಯಶ್ ತಾಯಿ ಕೊತ್ತಲವಾಡಿ ಚಿತ್ರದ ಮೂಲಕ ನಿರ್ಮಾಪಕಿಯಾಗಿ ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಸಿನಿಮಾ ಬಾಕ್ಸ್‌ ಆಫೀಸ್‌ ನಲ್ಲಿ ಹೇಳಿಕೊಳ್ಳುವಂತಹ ಕಲೆಕ್ಷನ್‌ ಮಾಡಿಲ್ಲ. ಮೊದಲ ಸಿನಿಮಾದಲ್ಲಿ ಸೋತ್ರೂ ಇದೀಗ ಮತ್ತೊಂದು ಸಾಹಸಕ್ಕೆ ಇಳಿದಿದ್ದಾರೆ. ಇದೀಗ ಯಶ್‌ ತಾಯಿ ಪುಷ್ಪ ಅವರು ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿ: ಕೇಂದ್ರದಿಂದ ರಾಜ್ಯಗಳಿಗೆ ಬಂಪರ್ ಗಿಫ್ಟ್ – 1,01,603 ಕೋಟಿಯಲ್ಲಿ ಕರ್ನಾಟಕಕ್ಕೆ ಸಿಕ್ತು ₹3705 ಕೋಟಿ

ಸ್ಟಾರ್ ನಟ ಯಶ್ ಅವರ ತಾಯಿ ಪುಷ್ಪ ನಿರ್ಮಾಪಕಿಯಾಗಿ ಮೊದಲ ಸಿನಿಮಾ ಕೊತ್ತಲವಾಡಿ  ನಿರ್ಮಾಣ ಮಾಡಿದ್ದರು. ಆದರೆ ಆ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ನಿರೀಕ್ಷಿತ ಪ್ರದರ್ಶನ ಕಾಣಲಿಲ್ಲ. ಅದಾದ ಬಳಿಕ ಅನುಷ್ಕಾ ಶೆಟ್ಟಿ ನಟನೆಯ ತೆಲುಗಿನ ಘಾಟಿ  ಸಿನಿಮಾ ಅನ್ನು ಕರ್ನಾಟಕದಲ್ಲಿ ವಿತರಣೆ ಮಾಡಿದರು. ಅದೂ ಸಹ ಬಾಕ್ಸ್ ಆಫೀಸ್​​ನಲ್ಲಿ ಮಕಾಡೆ ಮಲಗಿತು. ತಾವು ಸೋಲಲು ಬಂದವರಲ್ಲ, ಸೋಲಿನಿಂದ ಹೆದರುವುದೂ ಇಲ್ಲ ಎಂದು ಪುಷ್ಪ ಅವರು ಈ ಹಿಂದೆ ಸಂದರ್ಶನಗಳಲ್ಲಿ ಹೇಳಿದ್ದರು. ಇದೀಗ  ಪುಷ್ಪ ಅವರು ಹೊಸದೊಂದು ಸಿನಿಮಾ ಘೋಷಣೆ ಮಾಡಿದ್ದಾರೆ. ವಿಜಯದಶಮಿಯಂದು ಪುಷ್ಪ ಅವರು ತಮ್ಮ ನಿರ್ಮಾಣದ ಎರಡನೇ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಅವರ ಮೊದಲ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ನಿರ್ದೇಶನ ಮಾಡಿದ್ದ ಶ್ರೀರಾಜ್ ಅವರೆ, ಪುಷ್ಪ ಅವರು ನಿರ್ಮಿಸುತ್ತಿರುವ ಎರಡನೇ ಸಿನಿಮಾ ಅನ್ನೂ ನಿರ್ದೇಶನ ಮಾಡಲಿದ್ದಾರೆ. ಅದು ಮಾತ್ರವೇ ಅಲ್ಲದೆ, ‘ಕೊತ್ತಲವಾಡಿ’ ಸಿನಿಮಾಕ್ಕೆ ಕೆಲಸ ಮಾಡಿದ್ದ ಬಹುತೇಕ ತಂತ್ರಜ್ಞರು ಪುಷ್ಪ ಅವರ ಎರಡನೇ ಸಿನಿಮಾನಲ್ಲಿಯೂ ಕೆಲಸ ಮಾಡಲಿದ್ದಾರೆ. ಆದರೆ ಕಲಾವಿದರು ಮಾತ್ರ ಕತೆಗೆ ತಕ್ಕಂತೆ ಬದಲಾಗಲಿದ್ದಾರೆ.

ಪುಷ್ಪ ಅವರ ‘ಪಿಎ’ ಪ್ರೊಕ್ಷನ್​​ನ ಎರಡನೇ ಸಿನಿಮಾ ಇದಾಗಲಿದ್ದು, ಮೊದಲ ಸಿನಿಮಾಕ್ಕಿಂತಲೂ ಭಿನ್ನವಾದ ಕತೆಯುಳ್ಳ ಸಿನಿಮಾ ಅನ್ನು ನಿರ್ಮಿಸಲು ಪುಷ್ಪ ಅರುಣ್​​ಕುಮಾರ್ ಮುಂದಾಗಿದ್ದಾರೆ. ‘ಕೊತ್ತಲವಾಡಿ’ ಸಿನಿಮಾದ ಬಳಿಕ ನಿರ್ದೇಶಕ ಶ್ರೀರಾಜ್ ಅವರ ವಿರುದ್ಧ ಕೆಲ ಕಲಾವಿದರು ಸಂಭಾವನೆ ಬಾಕಿ ಉಳಿಸಿಕೊಂಡಿರುವ ಬಗ್ಗೆ ಆರೋಪಗಳನ್ನು ಮಾಡಿದ್ದರು. ಹಾಗಿದ್ದರೂ ಸಹ ಪುಷ್ಪ ಅವರು ಮತ್ತೊಮ್ಮೆ ಶ್ರೀರಾಜ್ ಅವರ ಮೇಲೆ ನಂಬಿಕೆ ಇಟ್ಟು ಅವರಿಗೆ ಸಿನಿಮಾ ನಿರ್ದೇಶನದ ಜವಾಬ್ದಾರಿ ವಹಿಸುತ್ತಿದ್ದಾರೆ.  ಪುಷ್ಪ ಅವರು ತಮ್ಮ ಎರಡನೇ ಸಿನಿಮಾದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಇನ್ನೂ ಬಿಟ್ಟುಕೊಟ್ಟಿಲ್ಲ. ಕೆಲವೇ ದಿನಗಳಲ್ಲಿ ಸಿನಿಮಾದ ಹೆಸರು, ಪಾತ್ರವರ್ಗ ಇನ್ನಿತರೆ ಮಾಹಿತಿಗಳನ್ನು ಹಂಚಿಕೊಳ್ಳಲಾಗುವುದು ಎಂದು ಪುಷ್ಪ ಅವರು ತಿಳಿಸಿದ್ದಾರೆ.

Shwetha M