ಇಸ್ರೇಲ್-ಇರಾನ್ ಯುದ್ಧ ಎಫೆಕ್ಟ್ – ಮಾರ್ಚ್ 19ಕ್ಕೆ ರಿಲೀಸ್ ಆಗಲ್ಲ ಟಾಕ್ಸಿಕ್!, ಮತ್ಯಾವಾಗ ರಿಲೀಸ್?

ಇಸ್ರೇಲ್-ಇರಾನ್ ಯುದ್ಧ ಎಫೆಕ್ಟ್ – ಮಾರ್ಚ್ 19ಕ್ಕೆ ರಿಲೀಸ್ ಆಗಲ್ಲ ಟಾಕ್ಸಿಕ್!,  ಮತ್ಯಾವಾಗ ರಿಲೀಸ್?

 ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ  ಮಾರ್ಚ್ 19ರ ಬದಲಾಗಿ ಜೂನ್ 4ರಂದು ಟಾಕ್ಸಿಕ್ ಸಿನಿಮಾ ಬಿಡುಗಡೆಯಾಗಲಿದೆ. ಈ ಕುರಿತು ಯಶ್ ಇನ್‌ಸ್ಟಾಗ್ರಾಂ ಮೂಲಕ ಮಾಹಿತಿ ನೀಡಿದ್ದಾರೆ.  ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಜಾಗತಿಕ ಮಾರುಕಟ್ಟೆಯ ಮೇಲೆ ದೊಡ್ಡ ಮಟ್ಟದ ಹೊಡೆತ ಬಿದ್ದಿದೆ. ಈ ಕಾರಣದಿಂದ ಸಿನಿಮಾದ ರಿಲೀಸ್ ಡೇಟ್ ಮುಂದಕ್ಕೆ ಹಾಕಲಾಗಿದೆ.

ಚಿತ್ರತಂಡದ ಹೇಳಿಕೆ ಪ್ರಕಾರ, ಅಂತರರಾಷ್ಟ್ರೀಯ ಪರಿಸ್ಥಿತಿ ಮತ್ತು ವಿದೇಶಿ ಮಾರುಕಟ್ಟೆಗಳ ಅನಿಶ್ಚಿತತೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಗಲ್ಫ್ ರಾಷ್ಟ್ರಗಳು ಕನ್ನಡ ಸಿನಿಮಾಗಳಿಗೆ ದೊಡ್ಡ ಮಾರುಕಟ್ಟೆಯಾಗುತ್ತಿರುವುದು ಎಲ್ಲರಿಗೂ ತಿಳಿದ ವಿಚಾರ. ‘ಧುರಂಧರ್ 2’ ಅಲ್ಲಲ್ಲಿ ಬಿಡುಗಡೆಯಾಗದಿರುವ ಹಿನ್ನಲೆಯಲ್ಲಿ, ಆ ಮಾರುಕಟ್ಟೆಯನ್ನು ಬಳಸಿಕೊಳ್ಳಲು ‘ಟಾಕ್ಸಿಕ್’ ತಂಡ ಯೋಜನೆ ರೂಪಿಸಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಿಂದ ಆ ಯೋಜನೆ ತಾತ್ಕಾಲಿಕವಾಗಿ ಅಡಚಣೆಗೊಳಗಾಗಿದೆ.

ಇದನ್ನೂ ಓದಿ: ಆರ್​ಸಿಬಿ ಫ್ಯಾನ್ಸ್​ಗೆ ಗುಡ್‌ನ್ಯೂಸ್ – ಚಿನ್ನಸ್ವಾಮಿಯಲ್ಲೇ ನಡೆಯಲಿದ ಉದ್ಘಾಟನಾ ಪಂದ್ಯ ಸೇರಿ 5 ಪಂದ್ಯ

‘ಟಾಕ್ಸಿಕ್’ ಮುಂದೂಡಿಕೆಗೆ ‘ಧುರಂಧರ್ 2’ ಕಾರಣ ಎಂಬ ಚರ್ಚೆಗಳು ಸಿನಿ ವಲಯದಲ್ಲಿ ಕೇಳಿಬರುತ್ತಿವೆ. ಆದರೆ ಚಿತ್ರತಂಡ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. “ನಮ್ಮ ಪಾಲುದಾರರು ಮತ್ತು ವಿದೇಶಿ ವಿತರಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಂಡಿದ್ದೇವೆ” ಎಂದು ಮಾತ್ರ ಹೇಳಲಾಗಿದೆ.
‘ಟಾಕ್ಸಿಕ್’ ಸಿನಿಮಾವನ್ನು KVN Productions ನಿರ್ಮಿಸುತ್ತಿದ್ದು, ನಟ Yash ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಈ ಚಿತ್ರವನ್ನು Geetu Mohandas ನಿರ್ದೇಶಿಸಿದ್ದಾರೆ.
ಚಿತ್ರದಲ್ಲಿ Kiara Advani, Rukmini Vasanth ಸೇರಿದಂತೆ ಹಲವು ಕಲಾವಿದರು ನಟಿಸಿದ್ದಾರೆ. ಭಾರೀ ಬಜೆಟ್ ಹಾಗೂ ಪ್ಯಾನ್-ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಾಗಿದೆ. ಜೂನ್ 4ರಂದು ಸಿನಿಮಾ ರಿಲೀಸ್ ಆಗಲಿದೆ.

Kishor KV

Leave a Reply

Your email address will not be published. Required fields are marked *