ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಗಿಫ್ಟ್ – ಉಚಿತ ಗ್ಯಾಸ್ ಸಿಲಿಂಡರ್ ಘೋಷಣೆ

ವಿವಿಧ ಯೋಜನೆಗಳ ಮೂಲಕ ಸರ್ಕಾರಗಳು ಉಚಿತ ಭಾಗ್ಯಗಳನ್ನು ನೀಡೋದು ಇತ್ತೀಚೆಗೆ ಭಾರಿ ಟ್ರೆಂಡಿಂಗ್ ನಲ್ಲಿದೆ. ಅದ್ರಲ್ಲೂ ಮಹಿಳೆಯರಿಗೆ ಬಂಪರ್ ಭಾಗ್ಯಗಳನ್ನ ಕೆಲ ಸರ್ಕಾರಗಳು ಘೋಷಣೆ ಮಾಡುತ್ತಿವೆ. ಇದೀಗ ಉತ್ತರ ಪ್ರದೇಶ ಸರ್ಕಾರ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದೆ.
ಇದನ್ನೂ ಓದಿ: MI ಚಾಯ್ಸ್ ರೋಹಿತ್ Or ಪಾಂಡ್ಯ? – ಸೂರ್ಯ Vs ಹಾರ್ದಿಕ್ EGO ಫೈಟ್
ಹೌದು, ಯುಪಿ ಸರ್ಕಾರ ಮಹಿಳೆಯರಿಗೆ ಭರ್ಜರಿ ಗಿಫ್ಟ್ ಘೋಷಣೆ ಮಾಡಿದೆ. ‘ಪ್ರಧಾನ ಮಂತ್ರಿ ಉಜ್ವಲ ಯೋಜನೆ’ಯ ಎಲ್ಲಾ ಫಲಾನುಭವಿಗಳಿಗೆ ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಿಸಿದ್ದಾರೆ. ಈ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ಉಚಿತ ಗ್ಯಾಸ್ ನೀಡಲು ದೀಪಾವಳಿಗೂ ಮುನ್ನ ಎಲ್ಲ ರೀತಿಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ. ಇದರಿಂದ ಎಲ್ಲಾ ಫಲಾನುಭವಿಗಳು ಸಮಯಕ್ಕೆ ಸರಿಯಾಗಿ ಅದರ ಪ್ರಯೋಜನಗಳನ್ನು ಪಡೆಯಬಹುದು ಎಂದು ತಿಳಿಸಿದ್ದಾರೆ.
ಗ್ರಾಮದ ಪ್ರತಿ ಮನೆಯಲ್ಲಿ ಬಡ ಮಹಿಳೆಯರಿಗೆ ಗ್ಯಾಸ್ ನೀಡಲು ಸರ್ಕಾರ ಈ ಯೋಜನೆ ಆರಂಭಿಸಿದೆ. ಇದರಿಂದ ಮಹಿಳೆಯರು ಸುಲಭವಾಗಿ ಗ್ಯಾಸ್ ನಲ್ಲಿ ಅಡುಗೆ ಮಾಡಬಹುದು. ಇಂದಿಗೂ, ಅನೇಕ ಹಳ್ಳಿಗಳ ಮನೆಗಳಲ್ಲಿ, ಮಹಿಳೆಯರು ಅನೇಕ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಹೀಗಾಗಿ ಹಬ್ಬದ ಸಮಯದಲ್ಲಿ ಉಚಿತ ಗ್ಯಾಸ್ ನೀಡಲು ಸರ್ಕಾರ ಮುಂದಾಗಿದೆ.