ಅಣ್ಣನಿಗೆ ಕೈ ಕೊಟ್ಟ ಹುಡುಗಿ ಜೀವ ತೆಗೆದ ತಮ್ಮ – ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ನೆ*ತ್ತರು ಹರಿಸಿದ ಪಾಪಿ

ಅಣ್ಣನಿಗೆ ಕೈ ಕೊಟ್ಟ ಹುಡುಗಿ ಜೀವ ತೆಗೆದ ತಮ್ಮ – ಬೆಂಗಳೂರಿನಲ್ಲಿ ನಡು ರಸ್ತೆಯಲ್ಲಿ ನೆ*ತ್ತರು ಹರಿಸಿದ ಪಾಪಿ

ಪ್ರೀತಿ ನಿರಾಕರಿಸಿದ್ದಕ್ಕೆ ಸಹೋದರನೊಂದಿಗೆ ಸೇರಿ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಜೀವನ್ ಭೀಮಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಧನುಷ್ ತನಗೆ ಡಿವೋರ್ಸ್ ಆಗಿದ್ದನ್ನ, ಒಂದು ಮಗು ಇರುವುದನ್ನು ಮುಚ್ಚಿಟ್ಟಿದ್ದ. ಈ ಸತ್ಯ ತಿಳಿಯುತ್ತಿದ್ದಂತೆ ಅಮೃತಾ ಧನುಷ್‌ನಿಂದ ದೂರ ಆಗಿದ್ಲು. ಇದರಿಂದ ಆಕ್ರೋಶಗೊಂಡ ಧನುಷ್‌ನ ತಮ್ಮ ಸೂರ್ಯ, ಅಣ್ಣನ ಪ್ರೀತಿಸಿ ಕೈ ಕೊಟ್ಟವಳನ್ನ  ಬಿಡುವುದಿಲ್ಲ ಎಂದು ನಡು ರಸ್ತೆಯಲ್ಲಿ ಕೊಲೆ ಮಾಡಿದ್ದಾನೆ.

ಇದನ್ನೂ ಓದಿ: ಡಾಕ್ಟರ್ ಗಂಡನ ಮೇಲೆ ಅನುಮಾನ – ಬೆಡ್‌ರೂಮ್‌ನಲ್ಲೇ ಪತಿಯ ಜೀವ ತೆಗೆದ ಡಾ.ಪ್ರಿಯಾಂಕ

ಹೆಚ್​​ಎಎಲ್ ಕೋಡಿಚಿಕ್ಕನಹಳ್ಳಿಯಲ್ಲಿ ಅಮೃತಾ ಕುಟುಂಬ ವಾಸವಾಗಿದ್ದು, ನಾಲ್ಕನೇ ವರ್ಷದ ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದಳು. ಮೂರು ವರ್ಷಗಳ ಹಿಂದೆ ಓಂ ಶಕ್ತಿ ಮಾಲೆ ಹಾಕುವ ವೇಳೆ ಪರಿಚಯವಾಗಿದ್ದ ಧನುಷ್ ಹಾಗೂ ಅಮೃತಾ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಧನುಷ್ ತನಗೆ ಈಗಾಗಲೇ ಮದುವೆಯಾಗಿ ವಿಚ್ಛೇದನವಾಗಿದ್ದು, ಒಂದು ಮಗು ಇರುವುದನ್ನು ಮುಚ್ಚಿಟ್ಟಿದ್ದ. ಈ ಸತ್ಯ ತಿಳಿಯುತ್ತಿದ್ದಂತೆ ಅಮೃತಾ ಆತನಿಂದ ದೂರವಾಗಿದ್ದಳು.

ಇದರಿಂದ ಆಕ್ರೋಶಗೊಂಡ ಧನುಷ್‌ನ ತಮ್ಮ ಸೂರ್ಯ, ಅಣ್ಣನ ಪ್ರೀತಿ ನಿರಾಕರಿಸಿದವಳನ್ನು ಬಿಡುವುದಿಲ್ಲ ಎಂದು ಹೇಳಿಕೊಂಡು ಕಳೆದ ಜುಲೈ 13ರಂದು ಸಂಜೆ ಯುವತಿಯ ಮನೆಯ ಬಳಿ ತೆರಳಿ ಗಲಾಟೆ ಮಾಡಿ, ಆಕೆಯ ಬೆನ್ನು ಮತ್ತು ಎದೆಗೆ ಮನಬಂದಂತೆ ಚಾಕುವಿನಿಂದ ಅಟ್ಟಹಾಸ ಮೆರೆದಿದ್ದ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಅಮೃತಾಳನ್ನು ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸಿದ ಅಮೃತಾ ಮೃತಪಟ್ಟಿದ್ದಾರೆ.

Kishor KV

Leave a Reply

Your email address will not be published. Required fields are marked *