ದೇವರಾಯನ ದುರ್ಗಕ್ಕೆ ಬೈಕ್ ರೈಡ್… ದುರಂತ ಅಂತ್ಯ!- ಯುವತಿಯ ತಲೆಯ ಮೇಲೆಯೇ ಹರಿದ ವಾಹನ

ದೇವರಾಯನ ದುರ್ಗಕ್ಕೆ ಸ್ನೇಹಿತನ ಜೊತೆ ಬೈಕ್ ರೈಡ್ಗೆ ತೆರಳಿದ್ದ ಯುವತಿಯೊಬ್ಬರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನೆಲಮಂಗಲದ ವೀರನಂಜಿಪುರದ ಬಳಿ ನಡೆದಿದೆ. ಬೈಕ್ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು, ನಿಲ್ಲಿಸದೆ ಪರಾರಿಯಾಗಿರುವುದರಿಂದ ಇದು ಹಿಟ್ ಆ್ಯಂಡ್ ರನ್ ಪ್ರಕರಣವಾಗಿದೆ.
ಸ್ನೇಹಿತನ ಜೊತೆ ಬೈಕ್ನಲ್ಲಿ ದೇವರಾಯನ ದುರ್ಗದ ಕಡೆಗೆ ಪ್ರಯಾಣಿಸುತ್ತಿದ್ದ ಯುವತಿ, ಮಾರ್ಗಮಧ್ಯೆ ಸಂಭವಿಸಿದ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಈ ಭೀಕರ ಅಪಘಾತದಲ್ಲಿ ಕೇರಳದ 23 ವರ್ಷದ ಆಲೀನಾ ಮೃತಪಟ್ಟಿದ್ದಾರೆ. ನೆಲಮಂಗಲದ ವೀರನಂಜಿಪುರದ ಬಳಿ ಡೆಡ್ಲಿ ಆಕ್ಸಿಡೆಂಟ್ ನಡೆದಿದೆ. ಬೈಕ್ ಹಿಂಬದಿ ಕುಳಿತ್ತಿದ್ದ ಯುವತಿ ಅಲೀನಾ ತಲೆ ಮೇಲೆ ವಾಹನ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಭಾರತೀಯ ನೌಕಾಪಡೆಗೆ ಹೊಸ ಶಕ್ತಿ!- ಕಾರವಾರದಲ್ಲಿ INS ಸಮರ್ಥಕ್ ಲೋಕಾರ್ಪಣೆ!
ಅಪಘಾತದಲ್ಲಿ ಬೈಕ್ ಸವಾರನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತದೇಹದ ಮರಣೋತ್ತರ ಪರೀಕ್ಷೆ ನಡೆದಿದ್ದು, ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನ ಯಾವುದು? ಚಾಲಕ ಯಾರು? ಎಂಬುದನ್ನು ಪತ್ತೆಹಚ್ಚಲು ತನಿಖೆ ಕೈಗೊಳ್ಳುವ ಸಾಧ್ಯತೆಯಿದೆ.
ಒಟ್ಟಿನಲ್ಲಿ, ರಸ್ತೆಗಳಲ್ಲಿ ಅಜಾಗರೂಕ ಚಾಲನೆ ಮತ್ತೊಮ್ಮೆ ಅಮಾಯಕ ಜೀವವೊಂದನ್ನು ಬಲಿ ಪಡೆದಿದೆ. ಅಪಘಾತದ ಬಳಿಕ ವಾಹನ ನಿಲ್ಲಿಸದೆ ಪರಾರಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಒತ್ತಾಯವೂ ಕೇಳಿಬರುತ್ತಿದೆ.

ನೋಡಿರಿ

