ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ – ಅರ್ಜಿ ಸಲ್ಲಿಕೆಗೆ ಏನೆಲ್ಲಾ ಷರತ್ತುಗಳಿವೆ?

ನಿರುದ್ಯೋಗಿಗಳಿಗೆ ಮಾಸಿಕ 3,000 ರೂಪಾಯಿ – ಅರ್ಜಿ ಸಲ್ಲಿಕೆಗೆ ಏನೆಲ್ಲಾ ಷರತ್ತುಗಳಿವೆ?

ಬೆಂಗಳೂರು: 2022 -23 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ 18 ರಿಂದ 25 ವರ್ಷದೊಳಗಿನ ಪದವೀಧರರಿಗೆ ಯುವ ನಿಧಿ ಯೋಜನೆಯಡಿ ಮಾಸಿಕ 3000 ರೂಪಾಯಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ.

ಇದನ್ನೂ ಓದಿ: ಜುಲೈ 1 ರಿಂದ 200 ಯುನಿಟ್‌ ವಿದ್ಯುತ್‌ ಉಚಿತ – ಬಾಡಿಗೆ ಮನೆಯಲ್ಲಿ ಇರುವವರಿಗೆ ಫ್ರೀ ಇದೆಯೇ?

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಯುವ ನಿಧಿ ಯೋಜನೆಯನ್ನು 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲು ತೀರ್ಮಾನಿಸಲಾಗಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 ವರ್ಷದ ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂ. ನೀಡಲಾಗುತ್ತದೆ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. 24 ತಿಂಗಳ ಒಳಗೆ ಉದ್ಯೋಗ ಸಿಕ್ಕರೆ ಈ ಯೋಜನೆ ರದ್ದಾಗುತ್ತದೆ. ಯುವಕ, ಯುವತಿ ಹಾಗೂ ತೃತೀಯ ಲಿಂಗಿಗಳಿಗೂ ಈ ಯೋಜನೆ ಅನ್ವಯ ಆಗಲಿದೆ ಎಂದು ಹೇಳಿದ್ದಾರೆ.

ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ ಇರಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ. 24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಅಂತಹ ಪದವೀಧರರಿಗೆ ಅಥವಾ ಡಿಪ್ಲೋಮಾ ಹೋಲ್ಡರ್ಸ್​​ಗಳಿಗೆ ಹಣ ಪಾವತಿ ಮಾಡಲಾಗುವುದಿಲ್ಲ. ನಿರುದ್ಯೋಗಿ ಅಂತಾ ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಪಾವತಿ ಮಾಡಲಾಗುತ್ತದೆ. ಅರ್ಜಿ ಸ್ವೀಕಾರಗೊಂಡ ದಿನದಿಂದ 24 ತಿಂಗಳು ಯುವನಿಧಿ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

suddiyaana