12 ಎಸೆತಗಳಲ್ಲಿ 50 ರನ್ ಹೊಡೆಯಲು ಸಾಧ್ಯವಾಗುತ್ತಿಲ್ಲ, ಯಾಕೆ? – ಶಿಷ್ಯನ ಕಾಲೆಳೆದ ಯುವರಾಜ್ ಸಿಂಗ್

12 ಎಸೆತಗಳಲ್ಲಿ 50 ರನ್ ಹೊಡೆಯಲು ಸಾಧ್ಯವಾಗುತ್ತಿಲ್ಲ, ಯಾಕೆ? – ಶಿಷ್ಯನ ಕಾಲೆಳೆದ ಯುವರಾಜ್ ಸಿಂಗ್

ಟೀಮ್ ಇಂಡಿಯಾದ ಯಂಗ್ ಗನ್ ಅಭಿಷೇಕ್ ಶರ್ಮಾ ಸಿಡಿಲಬ್ಬರ ಬ್ಯಾಟಿಂಗ್ ಮೂಲಕ ಕಿವೀಸ್ ಬೌಲರ್‌ಗಳನ್ನು ಬೆಂಡೆತ್ತಿದ್ದರು. ಜೊತೆಗೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದರು. ಇದರ ಬೆನ್ನಲ್ಲೇ ಯುವಿ ತನ್ನ ಶಿಷ್ಯನ ಕಾಲೆಳೆದಿದ್ದಾರೆ.

ಇದನ್ನೂ ಓದಿ:ರಿಚಾ ಹೋರಾಟ ವ್ಯರ್ಥ! – ಮುಂಬೈ ವಿರುದ್ಧ ಸೋಲೊಪ್ಪಿಕೊಂಡ RCB!

ನ್ಯೂಝಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಅಬ್ಬರದೊಂದಿಗೆ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಈ ಮೂಲಕ ಯುವರಾಜ್ ಸಿಂಗ್ ಬಳಿಕ ಟೀಮ್ ಇಂಡಿಯಾ ಪರ ಅತೀ ವೇಗದ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ. ಅಭಿಷೇಕ್ ಶರ್ಮಾ ಅವರ ಈ ದಾಖಲೆ ನಂತರ ಗುರು ಯುವರಾಜ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಮೂಲಕ ಯುವಿ ತನ್ನ ಶಿಷ್ಯನ ಕಾಲೆಳೆದಿದ್ದಾರೆ. 14 ಎಸೆತಗಳಲ್ಲಿ ಅಭಿಷೇಕ್ ಶರ್ಮಾ ಅರ್ಧಶತಕ ಪೂರೈಸುತ್ತಿದ್ದಂತೆ ಟ್ವೀಟ್ ಮಾಡಿರುವ ಯುವರಾಜ್ ಸಿಂಗ್, ನಿಂಗೆ ಇನ್ನೂ ಸಹ 12 ಎಸೆತಗಳಲ್ಲಿ 50 ರನ್ ಬಾರಿಸಲು ಸಾಧ್ಯವಾಗುತ್ತಿಲ್ಲ, ಯಾಕೆ ಎಂದು ಪ್ರಶ್ನಿಸಿದ್ದಾರೆ. ಅದ್ಭುತವಾಗಿ ಆಡಿದ್ದೀರಿ ಎಂದು ಪ್ರಶಂಸೆ ವ್ಯಕ್ತಪಡಿಸಿರುವ ಯುವರಾಜ್ ಸಿಂಗ್, ಇದೇ ರೀತಿ ಮುಂದುವರೆಯಿರಿ ಎಂದು ಹಾರೈಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 20 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ ಅಜೇಯ 68 ರನ್ ಬಾರಿಸಿದ್ದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಈ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ 154 ರನ್​ಗಳ ಗುರಿಯನ್ನು ಟೀಮ್ ಇಂಡಿಯಾ 10 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

Sulekha