ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ವಿಧಿವಶ – ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹುಸೇನ್
ಭಾರತೀಯ ಶಾಸ್ತ್ರೀಯ ಸಂಗೀತದಲ್ಲಿಜಾಕಿರ್ ಜಾದು
ವಿಶ್ವ ವಿಖ್ಯಾತ ತಬಲ ವಾದಕ ಜಾಕೀರ್ ಹುಸೇನ್ ವಿಧಿವಶರಾಗಿದ್ದಾರೆ. ಇವರಿಗೆ 73 ವರ್ಷ ಆಗಿತ್ತು. ಜಾಕೀರ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಅಮೆರಿಕಾದ ಸ್ಯಾನ್‌ಫ್ರಾನ್ಸಿಸ್ಕೋದಲ್ಲಿ ಜಾಕೀರ್ ಹುಸೇನ್ ನಿಧನರಾಗಿದ್ದಾರೆ. ಉಸ್ತಾದ್ ಜಾಕೀರ್ ಹುಸೇನ್ 1951ರಲ್ಲಿ ಮುಂಬೈನಲ್ಲಿ ಜನಿಸಿದ್ದರು. ಇವರನ್ನು ವಿಶ್ವದ ಶ್ರೇಷ್ಠ ತಬಲಾವಾದಕರಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಭಾರತೀಯ ಶಾಸ್ತ್ರೀಯ ಸಂಗೀತಕ್ಕೆ ಜಾಕೀರ್ ಹುಸೇನ್ ಅಪಾರ ಕೊಡುಗೆ ನೀಡಿದ್ದಾರೆ.
ಇದನ್ನೂ ಓದಿ : 2025ರಲ್ಲಿ ನಡೆಯೋದೇನು? – ಬಾಬಾ ವಂಗಾ, ನಾಸ್ಟ್ರಾಡಾಮಸ್ ಭಯಾನಕ ಭವಿಷ್ಯ!
ಜಾಕೀರ್ ಹುಸೇನ್ ಅವರು ತನ್ನ ಅಸಾಧಾರಣ ಪ್ರತಿಭೆಯಿಂದಾಗಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಭಾರತ ಸರ್ಕಾರದ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮವಿಭೂಷಣ ಪ್ರಶಸ್ತಿಗಳು ಇವರಿಗೆ ಲಭಿಸಿದೆ.
ಜಾಕೀರ್ ಹುಸೇನ್ ಅವರಿಗೆ 1999ರಲ್ಲಿ US ನ್ಯಾಷನಲ್ ಎಂಡೋಮೆಂಟ್ ಫಾರ್ ದಿ ಆರ್ಟ್ಸ್‌ನಿಂದ ನ್ಯಾಷನಲ್ ಹೆರಿಟೇಜ್ ಫೆಲೋಶಿಪ್ ಅವಾರ್ಡ್, ಭಾರತೀಯ ಶಾಸ್ತ್ರೀಯ ಸಂಗೀತದ ಜಾಗತಿಕ ರಾಯಭಾರಿಯಾಗಿಯೂ ಇವರು ಹೆಸರುಗಳಿಸಿದ್ದಾರೆ.
ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾಗಿರುವ ಜಾಕಿರ್ ಹುಸೇನ್, ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರವರ ಹಿರಿಯ ಪುತ್ರ. ಮಾರ್ಚ್ 9, 1951 ರಂದು ಮುಂಬೈನಲ್ಲಿ ಜನಿಸಿದ ಜಾಕಿರ್ ಹುಸೇನ್, ಚಿಕ್ಕ ವಯಸ್ಸಿನಿಂದಲೂ ಸಂಗೀತದ ವಾತಾವರಣದಲ್ಲಿ ಬೆಳೆದವರು. ಅವರ ತಂದೆಯ ಕಟ್ಟುನಿಟ್ಟಿನ ಮಾರ್ಗದರ್ಶನದಲ್ಲಿ ಜಾಕಿರ್ ಹುಸೇನ್ ಅಸಾಧಾರಣ ಪ್ರತಿಭೆಯಾಗಿ ಹೊರಹೊಮ್ಮಿದರು.