ಐಷಾರಾಮಿ ವಿಮಾನದಲ್ಲಿ ಸಿಎಂ ಜೊತೆ ಜಮೀರ್ ಪ್ರಯಾಣ –  ರಾಜ್ಯದಲ್ಲಿ ತೀವ್ರ ಬರ ಬಂದ್ರೂ ಇವರ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಬಿಜೆಪಿ ಕಿಡಿ

ಐಷಾರಾಮಿ ವಿಮಾನದಲ್ಲಿ ಸಿಎಂ ಜೊತೆ ಜಮೀರ್ ಪ್ರಯಾಣ –  ರಾಜ್ಯದಲ್ಲಿ ತೀವ್ರ ಬರ ಬಂದ್ರೂ ಇವರ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಬಿಜೆಪಿ ಕಿಡಿ

ಸಿಎಂ ಸಿದ್ದರಾಮಯ್ಯ ಅವರ ಜೊತೆ ಕರ್ನಾಟಕ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಐಷಾರಾಮಿ ಖಾಸಗಿ ವಿಮಾನವೊಂದರಲ್ಲಿ ಪ್ರಯಾಣಿಸಿದ್ದಾರೆ. ಅವರು ಪ್ರಯಾಣಿಸುತ್ತಿರುವ ವಿಡಿಯೋ ವೈರಲ್ ಭಾರಿ ವೈರಲ್‌ ಆದ ಬೆನ್ನಲ್ಲೇ ಪ್ರತಿಪಕ್ಷ ಬಿಜೆಪಿ ಅವರ ಮೇಲೆ ಮುಗಿಬಿದ್ದಿದೆ. ರಾಜ್ಯದಲ್ಲಿ ಬರ ಬಂದು ಜನತೆ ಸಂಕಷ್ಟದಲ್ಲಿದ್ದರೆ ಮಜಾವಾದಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತ ಜಮೀರ್ ಅಹ್ಮದ್ ಖಾನ್ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ರಾಜ್ಯ ಬಿಜೆಪಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಚಳಿಗಾಲ ಆರಂಭದಲ್ಲೇ  ಮೂಳೆ ನಡುಗಿಸುತ್ತಿದೆ ಚಳಿ – ಎಲ್ಲೆಲ್ಲೂ ಮಂಜು, ಈ ರಾಜ್ಯದಲ್ಲಿ 6 ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ

ಏನಿದು ಘಟನೆ?

ಸಿಎಂ ಸಿದ್ಧರಾಮಯ್ಯ, ಜಮೀರ್ ಅಹ್ಮದ್ ಖಾನ್, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌ ಅವರು ದೆಹಲಿಯಿಂದ ಬೆಂಗಳೂರಿಗೆ ಐಷಾರಾಮಿ ವಿಮಾನದಲ್ಲಿ ಪ್ರಯಾಣಿಸಿದ್ದರು. ಜಮೀರ್ ಅಹ್ಮದ್ ಖಾನ್ ಗುರುವಾರ ರಾತ್ರಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ವಿಮಾನ ಪ್ರಯಾಣದ ವಿಡಿಯೋವನ್ನು ಪೋಸ್ಟ್​ ಮಾಡಿದ್ದರು. ನಮ್ಮ ಹೆಮ್ಮಯ ನಾಯಕರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಸಂತಸದ ಕ್ಷಣಗಳು ಎಂದು ಜಮೀರ್  ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು.

ಇವರ ಆಡಂಬರಕ್ಕೇನು ಕಡಿಮೆ ಇಲ್ಲ ಎಂದು ಕಿಡಿಕಾರಿದ ಬಿಜೆಪಿ!

ಇದಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಕಿಡಿಕಾರಿರುವ ಬಿಜೆಪಿ, ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಮತ್ತು ಅವರ ಅತ್ಯಾಪ್ತ ಜಮೀರ್ ಅಹ್ಮದ್ ಖಾನ್ ಅವರ ಆಡಂಬರಕ್ಕೇನು ಕಡಿಮೆ ಇಲ್ಲ. ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ವಿಡಿಯೋದಲ್ಲಿ ಏನಿದೆ?

ಜಮೀರ್ ಅಹ್ಮದ್ ಅವರು ಐಷಾರಾಮಿ ಚಾರ್ಟರ್ಡ್ ಫ್ಲೈಟ್‌ನಲ್ಲಿ ಉದ್ದನೆಯ ಸೋಫಾದಲ್ಲಿ ಕ್ಯಾಮೆರಾಗೆ ಪೋಸ್ ನೀಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು. ವಿಶೇಷ ವಿಮಾನದಲ್ಲಿ ಸಿಎಂ ಸಿದ್ದರಾಮಯ್ಯ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜ್‌ ಕೂಡ ಇರುವುದು 32 ಸೆಕೆಂಡುಗಳ ವೀಡಿಯೊದಲ್ಲಿದೆ.

Shwetha M