ವೈಭವ್ ಬೇಡ.. ಸಂಜು ಬೆಸ್ಟ್- ಭಾರತದ ಸೋಲಿಗೆ PAK ಸಂಭ್ರಮ
WTC ರೇಸ್ನಿಂದ ಇಂಗ್ಲೆಂಡ್ OUT

ಜಪಾನ್ನ ಐಚಿ-ನಗೋಯಾದಲ್ಲಿ ನಡೆಯಲಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಕ್ರಿಕೆಟ್ ಟೂರ್ನಿಗಾಗಿ ಭಾರತ ಮಹಿಳಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಲಿಷ್ಠ ಪಡೆಯನ್ನು ಹರ್ಮನ್ಪ್ರೀತ್ ಕೌರ್ ಮುನ್ನಡೆಸಲಿದ್ದು, ಉಪನಾಯಕಿಯಾಗಿ ಸ್ಮೃತಿ ಮಂಧಾನ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಈ ಬಾರಿಯ ತಂಡದಲ್ಲಿ 17 ವರ್ಷದ ಯುವ ವಿಕೆಟ್ ಕೀಪರ್-ಬ್ಯಾಟರ್ ಜಿ. ಕಮಲಿನಿ ಅವರ ಸೇರ್ಪಡೆಯಾಗಿದ್ದಾರೆ. ವಿಕೆಟ್ ಕೀಪರ್ ಬ್ಯಾಟರ್ ಯಾಸ್ತಿಕಾ ಭಾಟಿಯಾ ಅವರು ತಂಡದಿಂದ ಹೊರಬಿದ್ದಿದ್ದು, ಅವರ ಬದಲಿಗೆ ಕಮಲಿನಿ ಆಯ್ಕೆಯಾಗಿದ್ದಾರೆ.
ಐಸಿಸಿ ಪ್ರಕಟಿಸಿದ ಹೊಸ ಅರ್ಹತಾ ನಿಯಮಾವಳಿಯ ಮೂಲಕ ಭಾರತ ಮಹಿಳಾ ತಂಡ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅಧಿಕೃತವಾಗಿ ಅರ್ಹತೆ ಪಡೆದುಕೊಂಡಿದೆ. 128 ವರ್ಷಗಳ ಬಳಿಕ ಕ್ರಿಕೆಟ್ ಒಲಿಂಪಿಕ್ಸ್ಗೆ ಮರಳಲಿದ್ದು, 2028ರಲ್ಲಿ ಲಾಸ್ ಏಂಜಲೀಸ್ನಲ್ಲಿ ಪುರುಷರ ಹಾಗೂ ಮಹಿಳೆಯರ ಟಿ20 ಸ್ಪರ್ಧೆಗಳಲ್ಲಿ ತಲಾ ಆರು ತಂಡಗಳು ಭಾಗವಹಿಸಲಿವೆ. ಭಾರತ, ಆಸ್ಟ್ರೇಲಿಯಾ, ದಕ್ಷಿಣ ಆಫ್ರೀಕಾ, ಇಂಗ್ಲೆಂಡ್ ತಂಡಗಳು ಈಗ ಅರ್ಹತೆೆ ಪಡೆದ ನಾಲ್ಕು ತಂಡಗಳಾಗಿವೆ.
ಐರ್ಲೆಂಡ್ ವಿರುದ್ಧ ಟಿ20 ಸರಣಿಯಲ್ಲಿ ಭಾರತ ಸೋತಿದ್ದಕ್ಕೆ ಪಾಕ್ ಮಾಜಿ ಕ್ರಿಕೆಟಿಗ ಅಬಿದ್ ಅಲಿ ಸಂತಸ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿರುವ ಪಾಕ್ ಮಾಜಿ ಕ್ರಿಕೆಟಿಗ ಅಬಿದ್ ಅಲಿ ಭಾರತ ಸೋತಿರುವುದನ್ನು ನೋಡಲು ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ. ಅಬಿದ್ ಅಲಿ ಅವರ ಈ ಪೋಸ್ಟ್ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಣ ಟಿ20 ಸರಣಿಯು ನಾಳೆಯಿಂದ ಶುರುವಾಗಲಿದೆ. ನಾಳೆ ಪಂದ್ಯ ರಾತ್ರಿ ಗಂಟೆಗೆ ಆರಂಭ ಆಗಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ಒಟ್ಟು 8 ಪಂದ್ಯಗಳ ಸರಣಿ ನಡೆಯಲಿದೆ. ಮೊದಲಿಗೆ ಐದು ಮ್ಯಾಚ್ಗಳ ಟಿ20 ಸರಣಿ ಜರುಗಲಿದೆ. ಇದಾದ ಬಳಿಕ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಐರ್ಲೆಂಡ್ ಮೇಲೆ ಸೋತಿರೋ ಟೀಂ ಇಂಡಿಯಾಗೆ ಇಂಗ್ಲೆಂಡ್ ಮೇಲೆ ಗಲ್ಲೋದು ಬಿಗ್ ಚಾಲೆಂಜ್ ಆಗಿದೆ.
ಸಂಜು ಸ್ಯಾಮ್ಸನ್ ಅವರನ್ನು ಕೈಬಿಡಲಾಗುವುದಿಲ್ಲ ಎಂದು ಟೀಮ್ ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡೊಶ್ಚೇಟ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚೆಗೆ ಭಾರತ ತಂಡ ಟಿ20 ವಿಶ್ವಕಪ್ ಗೆಲ್ಲುವಲ್ಲಿ ಸಂಜು ಸ್ಯಾಮ್ಸನ್ ಪ್ರಮುಖ ಪಾತ್ರ ವಹಿಸಿದ್ದರು. ಕೇವಲ ಒಂದೆರಡು ಪಂದ್ಯಗಳ ವೈಫಲ್ಯದ ಆಧಾರದ ಮೇಲೆ ಅವರನ್ನು ಕೈಬಿಡುವುದು ಸರಿಯಲ್ಲ. ನಾವು ಆಟಗಾರರಿಗೆ ದೀರ್ಘಾವಧಿಯವರೆಗೆ ಅವಕಾಶ ನೀಡಲು ಬಯಸುತ್ತೇವೆ. ಸೂರ್ಯವಂಶಿ ತಮ್ಮ ಅವಕಾಶಕ್ಕಾಗಿ ಕಾಯಲೇಬೇಕಾಗುತ್ತದೆ ರಯಾನ್ ಟೆನ್ ಡೊಶ್ಚೇಟ್ ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತಕ್ಕೆ ಕೈಕೊಟ್ಟ Middle Order! – ಸ್ಪಿನ್ನರ್ಸ್ ಗೆ ಬೆಸ್ಟ್ ಮೆಡಿಸಿನ್ ಪಾಟಿದಾರ್
ಐರ್ಲೆಂಡ್ ಕ್ರಿಕೆಟ್ ತಂಡದ ಮುಖ್ಯ ಕೋಚ್ ಹೆನ್ರಿಕ್ ಮಲನ್, ಭಾರತದ ವಿರುದ್ಧದ ಐತಿಹಾಸಿಕ ಟಿ20 ಸರಣಿ ಗೆಲುವಿನ ಬೆನ್ನಲ್ಲೇ ಅಚ್ಚರಿಯ ರಾಜೀನಾಮೆ ನೀಡಿದ್ದಾರೆ . ತಂಡದೊಂದಿಗೆ ಮಾಡಿದ ಸಾಧನೆಗಳಿಂದ ತಾನು ಸಂತೋಷವಾಗಿದ್ದೇನೆ ಎಂದು ಮಲನ್ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದಾಗ್ಯೂ, ಮುಂಬರುವ ವರ್ಷಗಳಿಗೆ ತಯಾರಿ ನಡೆಸಲು ಹೊಸ ತರಬೇತುದಾರರಿಗೆ ಈಗಲೇ ಸಮಯ ನೀಡುವುದು ಮುಖ್ಯ. ಹೀಗಾಗಿ ನಾನು ಅವಧಿಗೂ ಮುನ್ನವೇ ರಾಜೀನಾಮೆ ನೀಡುತ್ತಿರುವುದಾಗಿ ಮಲನ್ ತಿಳಿಸಿದ್ದಾರೆ.
2025-27 ರ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಪ್ರಮುಖ ಬದಲಾವಣೆ ಕಂಡುಬಂದಿದೆ. ಆಂಟಿಗುವಾದಲ್ಲಿ ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಟೆಸ್ಟ್ ಪಂದ್ಯದ ಫಲಿತಾಂಶವು ಪಾಯಿಂಟ್ ಪಟ್ಟಿಯಲ್ಲಿ ಸಂಪೂರ್ಣ ಬದಲಾವಣೆಗಳನ್ನು ತಂದಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ವೆಸ್ಟ್ ಇಂಡೀಸ್ ವಿರುದ್ಧ ಹೀನಾಯವಾಗಿ ಸೋತ ಕಾರಣ, ಭಾರತ ಅಂಕಪಟ್ಟಿಯಲ್ಲಿ ಐದನೇ ಸ್ಥಾನಕ್ಕೆ ಜಿಗಿದಿದೆ. ಇನ್ನೂ ಶ್ರೀಲಂಕಾ 6ನೇ ಸ್ಥಾನಕ್ಕೆ ಕುಸಿದಿದೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಇಂಗ್ಲೆಂಡ್ ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ನ್ಯೂಝಿಲೆಂಡ್ ವಿರುದ್ಧದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ್ದ ಇಂಗ್ಲೆಂಡ್, ಬ್ಯಾಕ್ ಟು ಬ್ಯಾಕ್ ಎರಡು ಮ್ಯಾಚ್ಗಳಲ್ಲಿ ಸೋತು ಇದೀಗ WTC ಫೈನಲ್ ರೇಸ್ನಿಂದ ಹೊರಬಿದ್ದಿದೆ. ಇಂಗ್ಲೆಂಡ್ ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನಕ್ಕೆ ಕುಸಿದಿದ್ದು, ಇದರೊಂದಿಗೆ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ನಿಂದ ಹೊರಬಿದ್ದಿದೆ.
ಟೆಸ್ಟ್ ಸರಣಿ ಗೆಲುವಿನೊಂದಿಗೆ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಬೇಕು ಎಂದುಕೊಂಡಿದ್ದ ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ಗೆ ಸೋಲಿನ ಬೀಳ್ಕೊಡುಗೆ ಸಿಕ್ಕಿದೆ. ಇಂಗ್ಲೆಂಡ್ ವಿರುದ್ಧ ನ್ಯೂಜಿಲೆಂಡ್ 2-1 ಅಂತರದಲ್ಲಿ ಸರಣಿಯನ್ನು ಗೆದ್ದಿದೆ. ಈ ಗೆಲುವಿನೊಂದಿಗೆ ನಿವೃತ್ತಿ ಜೀವನಕ್ಕೆ ಕಾಲಿಡಬೇಕೆಂದಿದ್ದ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಸೋಲಿನ ಮೂಲಕ ಅಂತರರಾಷ್ಟ್ರೀಯ ವೃತ್ತಿಜೀವನಕ್ಕೆ ಕಾಲಿಟ್ಟಿದ್ದಾರೆ.

ನೋಡಿರಿ

